ಹಾಸನ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ; ಕಸಾಯಿಖಾನೆಗೆ ಸಾಗಿಸುತ್ತಿದ್ದ 18 ಕರುಗಳ ಸಾವು
ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 41 ಕರುಗಳ ಪೈಕಿ 18 ಕರುಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ದ್ಯಾವಪ್ಪನಹಳ್ಳಿಯಲ್ಲಿ ಗುರುವಾರ ನಡೆದಿದೆ.

ಹಾಸನ: ವಿದ್ಯುತ್ ಕಂಬಕ್ಕೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ 41 ಕರುಗಳ ಪೈಕಿ 18 ಕರುಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ದ್ಯಾವಪ್ಪನಹಳ್ಳಿಯಲ್ಲಿ ಗುರುವಾರ ನಡೆದಿದೆ.
ಗ್ರಾಮಸ್ಥರ ಸಹಾಯ ಪಡೆದು ಪೊಲೀಸರು 23 ಕರುಗಳನ್ನು ರಕ್ಷಿಸಿ ಅವುಗಳನ್ನು ಮೈಸೂರಿನ ಪಿಂಜರಾಪೋಲ್ ಸೊಸೈಟಿಗೆ ದಾಖಲಿಸಿದ್ದಾರೆ.
ಘಟನೆ ಬಗ್ಗೆ ಮಾಹಿತಿ ಪಡೆದ ಬಳಿಕ ಬೇಲೂರು ಶಾಸಕ ಕೆಎಸ್ ಲಿಂಗೇಶ್ ಸ್ಥಳಕ್ಕೆ ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸಾಮಾಜಿಕ ಜಾಲತಾಣದಲ್ಲಿಯೂ ಈ ಘಟನೆ ಬಗ್ಗೆ ಶಾಸಕರು ಬರೆದಿದ್ದಾರೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹಾಸನ, ಮಡಿಕೇರಿ, ಮಂಗಳೂರಿನಲ್ಲಿದ್ದ ಕಸಾಯಿಖಾನೆಗೆ ತೆರಳುವ ಧಾವಂತದಲ್ಲಿ ವೇಗವಾಗಿ ಚಲಿಸುತ್ತಿದ್ದಾಗ ತಿರುವಿನಲ್ಲಿ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡ ಚಾಲಕ
ವಾಹನದಲ್ಲಿ ಸಾಗಿಸುತ್ತಿದ್ದ ಕರುಗಳ ಬಾಯಿ ಹಾಗೂ ಕಾಲುಗಳನ್ನು ಪ್ಲಾಸ್ಟಿಕ್ ಹಗ್ಗದಿಂದ ಬಿಗಿಯಲಾಗಿತ್ತು ಹಾಗೂ ಟಾರ್ಪಾಲ್ ನಿಂದ ಮುಚ್ಚಲಾಗಿತ್ತು. ಉಸಿರುಗಟ್ಟಿ ಕರುಗಳು ಸಾವನ್ನಪ್ಪಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ವಾಹನ ಅಪಘಾತಕ್ಕೆ ಒಳಗಾದರೂ ಸಹ ಚಾಲಕ ಪವಾಡಸದೃಶವಾಗಿ ಯಾವುದೇ ಗಾಯಗಳಿಲ್ಲದೇ ಅಪಾಯದಿಂದ ಪಾರಾಗಿದ್ದಾನೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಆರ್ ಗಿರೀಶ್ ಹಾಗೂ ಎಸ್ ಪಿ ಕೆಆರ್ ಶ್ರೀನಿವಾಸಗೌಡ ಭೇಟಿ ನೀಡಿ ಪರಿಶೀಲಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಹಳೇಬೀಡು ಪೊಲೀಸರು ಸರಕು ಸಾಗಣೆ ವಾಹನದ ಮಾಲಿಕ ಪರಮೇಶ್ ಹಾಗೂ ತಪ್ಪಿಸಿಕೊಂಡಿರುವ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕರುಗಳ ಸಾವಿಗೆ ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥ ಬಸವರಾಜ ವಾಹನಗಳಲ್ಲಿ ಗೋವುಗಳ ಕಳ್ಳಸಾಗಣೆಯನ್ನು ತಡೆಯುವಲ್ಲಿ ಪೊಲೀಸರ ವೈಫಲ್ಯವನ್ನು ಬೊಟ್ಟು ಮಾಡಿದ್ದಾರೆ. ಪೊಲೀಸರು ಹಾಗೂ ಅಕ್ರಮ ಗೋವು ಸಾಗಣೆ ಮಾಡುವವರು ಶಾಮೀಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


