ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.

ಬಾಗಲಕೋಟೆ: ಉತ್ತರ ಕರ್ನಾಟಕದ ಜೀವ ನದಿ ಕೃಷ್ಣೆಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು.
ಬಸವರಾಜ ಬೊಮ್ಮಾಯಿ ಅವರು ಇಂದು ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಬಾಗಿನ ಅರ್ಪಿಸಿ, ವಿಶೇಷ ಪೂಜೆ ಸಲ್ಲಿಸಿದರು.
ಸಿಎಂ ಆದ ಬಳಿಕ ಬೊಮ್ಮಾಯಿ ಅವರ ಮೊದಲ ಬಾಗಲಕೋಟೆ ಪ್ರವಾಸ ಇದಾಗಿದ್ದು, ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಲಮಟ್ಟಿಗೆ ಆಗಮಿಸಿದರು. ಸಿಎಂ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಮೂರು ಅರ್ಚಕರು ಗಂಗಾಮಾತೆಗೆ ಪೂಜೆ ನೇರವೇರಿಸಿದರು. ನಂತರ ನದಿಯ ಬಳಿ ಸೀರೆ, ಕುಪ್ಪಸ, ಹಣ್ಣು, ಹೂವು ಹಾಗೂ ಉಡಿ ತುಂಬುವ ಸಾಮಗ್ರಿಗಳನ್ನೊಳಗೊಂಡ ಬಾಗಿನವನ್ನು ಕೃಷ್ಣೆಯ ಮಡಿಲಿಗೆ ಸಮರ್ಪಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಂಸದ ಪಿ.ಸಿ. ಗದ್ದಿಗೌಡರ್ ಶಾಸಕರಾದ ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ ಮತ್ತಿತರರಿದ್ದರು. ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


