ರಾಜ್ಯ

ಬೆಳಗಾವಿ: ಹಿಂಡಲಗಾ ಜೈಲಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಡುಗಡೆ, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿಂದ ಸ್ವಾಗತ

ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಶನಿವಾರ ಬಿಡುಗಡೆಗೊಂಡಿದ್ದಾರೆ.ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಕೇಸಿನಲ್ಲಿ ಜಾಮೀನು ದೊರೆತು ವಿನಯ್ ಕುಲಕರ್ಣಿ 9 ತಿಂಗಳ ಬಳಿಕ ಇಂದು ಬಿಡುಗಡೆಗೊಂಡಿದ್ದಾರೆ.

ಬೆಳಗಾವಿ: ಹಿಂಡಲಗಾ ಜೈಲಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಡುಗಡೆ, ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿಂದ ಸ್ವಾಗತ
ವಿನಯ್ ಕುಲಕರ್ಣಿ ಜೈಲಿಗೆ ಹೋಗಿದ್ದ ಸಂದರ್ಭ
Published On :

ಬೆಳಗಾವಿ: ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಶನಿವಾರ ಬಿಡುಗಡೆಗೊಂಡಿದ್ದಾರೆ.ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಕೇಸಿನಲ್ಲಿ ಜಾಮೀನು ದೊರೆತು ವಿನಯ್ ಕುಲಕರ್ಣಿ 9 ತಿಂಗಳ ಬಳಿಕ ಇಂದು ಬಿಡುಗಡೆಗೊಂಡಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಅವರನ್ನು ಹಿಂಡಲಗಾ ಜೈಲಧಿಕಾರಿಗಳು ಪ್ರಕ್ರಿಯೆ ಮುಗಿಸಿ ಬಿಡುಗಡೆಗೊಳಿಸಿದ್ದಾರೆ. ಜೈಲಿನ ಹೊರಗೆ ಭಾರೀ ಸಂಖ್ಯೆಯಲ್ಲಿ ಅಪಾರ ಅಭಿಮಾನಿಗಳು, ಕುಟುಂಬಸ್ಥರು ಅವರನ್ನು ಸ್ವಾಗತಿಸಿದರು. ಹೆಣ್ಣುಮಕ್ಕಳು ಪೂರ್ಣಕುಂಭ ಸ್ವಾಗತ ಮಾಡಿದರು.

ಈ ವೇಳೆ ನೂಕುನುಗ್ಗಲು ಉಂಟಾಯಿತು, ಜನರು ಕೊರೋನಾ ನಿಯಮ ಮರೆತು ತಳ್ಳಾಡುತ್ತಿರುವುದು ಕಂಡುಬಂತು. ಪೊಲೀಸರು ಗುಂಪನ್ನು ಚದುರಿಸಲು ಹರಸಾಹಸಪಟ್ಟರು. 

ಮುಂಬರುವ ದಿನಗಳಲ್ಲಿ ನಾನು ಹೇಗಿರಬೇಕೆಂದು ಎಂದು ಪಾಠ ಕಲಿತಿದ್ದೇನೆ, ಇಂದು ಜಾಮೀನು ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ನಿರಪರಾಧಿಯಾಗಿ ಹೊರಬರುತ್ತೇನೆ, ನನಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್ ಗೆ ಧನ್ಯವಾದ ಹೇಳುತ್ತೇನೆ ಎಂದು ವಿನಯ್ ಕುಲಕರ್ಣಿ ಹೇಳಿದರು. ಇನ್ನು ಮುಂದೆ ನಾನು ಬೇರೆಯದೇ ರೀತಿಯ ರಾಜಕಾರಣಿಯಾಗುತ್ತೇನೆ ಎಂದರು. 

ವೀಕೆಂಡ್ ಕರ್ಫ್ಯೂ ಇದ್ದರೂ ಸಾವಿರಾರು ಜನ: ಹಿಂಡಲಗಾ ಜೈಲಿಂದ ಹೊರಬಂದ ವಿನಯ್ ಕುಲಕರ್ಣಿ ಅವರನ್ನು ಸಾವಿರಾರು ಜನ ಸ್ವಾಗತಿಸಿ ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಿ ಜೈಕಾರ ಕೂಗಿದರು. ಕೋವಿಡ್ ನಿಯಮ, ವಾರಾಂತ್ಯ ಕರ್ಫ್ಯೂ ಇದ್ದರೂ ಇಷ್ಟೊಂದು ಸಂಖ್ಯೆಯಲ್ಲಿ ಜನರು ದೈಹಿಕ ಅಂತರ ಮರೆದು, ಮಾಸ್ಕ್ ಧರಿಸದೆ ಸೇರಿದ್ದು ಹೇಗೆ, ಇದಕ್ಕೆ ಯಾರು ಅನುಮತಿ ನೀಡಿದರು, ಬೆಳಗಾವಿ ನಗರ ಪೊಲೀಸ್ ಇಲಾಖೆ ಹೇಗೆ ಅನುಮತಿ ಕೊಟ್ಟಿತು ಎಂಬ ಪ್ರಶ್ನೆ ಉದ್ಭವವಾಗಿದೆ.

ಸ್ವತಃ ವಿನಯ್ ಕುಲಕರ್ಣಿ ಸೇರಿದಂತೆ ಯಾರೂ ಮಾಸ್ಕ್ ಧರಿಸಿದರಲಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.