ಬೆಳಗಾವಿ: ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗುತ್ತಿರುವ ವಿನಯ್ ಕುಲಕರ್ಣಿ ಸ್ವಾಗತಕ್ಕೆ ಬಂದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬೆಳಗಾವಿಯ ಹಿಂಡಲಗ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಇನ್ನು ಕೆಲವೇ ಹೊತ್ತಿನಲ್ಲಿ ಬಿಡುಗಡೆಯಾಗುತ್ತಿದ್ದಾರೆ.

ಬೆಳಗಾವಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಬೆಳಗಾವಿಯ ಹಿಂಡಲಗ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಇನ್ನು ಕೆಲವೇ ಹೊತ್ತಿನಲ್ಲಿ ಬಿಡುಗಡೆಯಾಗುತ್ತಿದ್ದಾರೆ.
ಅವರು ಜೈಲಿನಿಂದ ಹೊರಗೆ ಬರುವಾಗ ಪ್ರೀತಿಯಿಂದ ಮತ್ತು ಸಂತೋಷದಿಂದ ಸ್ವಾಗತಿಸಲು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಅವರ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಜೈಲಿನಿಂದ ಹೊರಗೆ ಜಮಾಯಿಸಿದ್ದಾರೆ.
ಈ ವೇಳೆ ನೂಕು ನುಗ್ಗಲು ಉಂಟಾಗಬಾರದು, ಅಲ್ಲದೆ ಬೆಳಗಾವಿಯಲ್ಲಿ ಕೊರೋನಾ ನಿಮಿತ್ತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ಪೊಲೀಸರು ಅಭಿಮಾನಿಗಳನ್ನು ಚದುರಿಸಲು ಹರಸಾಹಸಪಡುತ್ತಿದ್ದಾರೆ.
ಈ ವೇಳೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಇವತ್ತು ನಮ್ಮೆಲ್ಲರಿಗೆ ಭಾವನಾತ್ಮಕ ದಿನ, ನಮ್ಮೆಲ್ಲರ ಅಣ್ಣ ವಿನಯ್ ಕುಲಕರ್ಣಿಯವರು ಇಂದು ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ, ನಾಳೆ ರಕ್ಷಾ ಬಂಧನವಿದೆ. ಹಬ್ಬದ ಸಮಯದಲ್ಲಿ ಅಣ್ಣ ಹೊರಬರುತ್ತಿರುವುದು ನಮಗೆಲ್ಲರಿಗೂ ಸಂತೋಷ ಎಂದರು.
ವಿನಯ್ ಕುಲಕರ್ಣಿಯವರು ಮಾನಸಿಕವಾಗಿ ಗಟ್ಟಿಯಾಗಿದ್ದಾರೆ, ಆದರೂ ಇನ್ನಷ್ಟು ಧೈರ್ಯ, ಉತ್ಸಾಹ, ಸಂತೋಷ ತುಂಬಲು ನಾವಿಂದು ಇಲ್ಲಿ ಸೇರಿದ್ದೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


