ದೊಡ್ಡಬೊಮ್ಮಸಂದ್ರ ಕೆರೆ ಪ್ರದೇಶದಲ್ಲಿ ಬಿಬಿಎಂಪಿಯಿಂದ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ
ದೊಡ್ಡಬೊಮ್ಮಸಂದ್ರ ಕೆರೆ ಪ್ರದೇಶದಲ್ಲಿ ಅಕ್ರಮವಾಗಿ ಒತ್ತುವರಿ ಪಡಿಸಿಕೊಳ್ಳಲಾಗಿದ್ದ ಜಾಗವನ್ನು ಬಿಬಿಎಂಪಿ ತೆರವುಗೊಳಿಸಿ, ತನ್ನ ವಶಕ್ಕೆ ಪಡೆದುಕೊಂಡಿದೆ.

ಬೆಂಗಳೂರು: ದೊಡ್ಡಬೊಮ್ಮಸಂದ್ರ ಕೆರೆ ಪ್ರದೇಶದಲ್ಲಿ ಅಕ್ರಮವಾಗಿ ಒತ್ತುವರಿ ಪಡಿಸಿಕೊಳ್ಳಲಾಗಿದ್ದ ಜಾಗವನ್ನು ಬಿಬಿಎಂಪಿ ತೆರವುಗೊಳಿಸಿ, ತನ್ನ ವಶಕ್ಕೆ ಪಡೆದುಕೊಂಡಿದೆ. ಶನಿವಾರ ತೆರವು ಕಾರ್ಯಾಚರಣೆ ನಡೆಸಿದ್ದ ಬಿಬಿಎಂಪಿ ಅಧಿಕಾರಿಗಳು 36 ಗುಂಟೆ ಭೂಪ್ರದೇಶವನ್ನು ತೆರವುಗೊಳಿಸಿರುವುದಾಗಿ ತಿಳಿದುಬಂದಿದೆ. ಯಲಹಂಕ ವಲಯಕ್ಕೆ ಸೇರುವ ದೊಡ್ಡಬೊಮ್ಮಸಂದ್ರ ಕೆರೆಯ ವಿಸ್ತೀರ್ಣ 124 ಎಕರೆಯಾಗಿದೆ.
ತೆರವು ಕಾರ್ಯಾಚರಣೆಯಲ್ಲಿ ವಶಪಡಿಸಿಕೊಳ್ಳಲಾಗಿರುವ ಭೂಮಿಯಲ್ಲಿ 12 ಗುಂಟೆ ಭೂಮಿಯನ್ನು ಉದ್ಯಾನವನ ನಿರ್ಮಾಣಕ್ಕೆ ಬಳಕೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಬೆಂಗಳೂರು ನಗರ ಡೆಪ್ಯುಟಿ ಕಮೀಷನರ್ ಕಚೇರಿ ಬೆಂಗಳೂರು ಉತ್ತರ, ಆನೇಕಲ್, ಬೆಂಗಳೂರು ದಕ್ಷಿಣ ಮತ್ತು ಯಲಹಂಕದಲ್ಲಿ ಒಟ್ಟು 12 ಕೆರೆ ಪ್ರದೇಶಗಳಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದ್ದ 18 ಎಕರೆ 28 ಗುಂಟೆ ಭೂಪ್ರದೇಶವನ್ನು ತೆರವುಗೊಳಿಸಿ ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ. ಯಲಹಂಕ ವಲಯದಲ್ಲಿನ 1.20 ಎಕರೆ ಗೋಮಾಳ ಪ್ರದೇಶವನ್ನೂ ಇದೇ ಸಂದರ್ಭದಲ್ಲಿ ವಶಪಡಿಸಿಕೊಂಡಿದೆ.
ಕರ್ನಾಟಕ ಉಚ್ಛನ್ಯಾಯಾಲಯ ಮತ್ತು ಲೋಕಾಯುಕ್ತ ನಿರ್ದೇಶನದ ಮೇರೆಗೆ ಬಿಬಿಎಂಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


