ತರಗತಿಗಳು ಪುನಾರಂಭ: ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕ-ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸಚಿವರಿಗೆ ಸಿಎಂ ಸೂಚನೆ
ಕೊರೋನಾ 2 ನೇ ಅಲೆಯ ಹಿನ್ನೆಲೆಯಲ್ಲಿ ಈ ವರೆಗೂ ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದ ಶಾಲೆಗಳಲ್ಲಿ ಸೋಮವಾರ (ಆ.23)ರಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗುತ್ತಿವೆ.

ಬೆಂಗಳೂರು: ಕೊರೋನಾ 2 ನೇ ಅಲೆಯ ಹಿನ್ನೆಲೆಯಲ್ಲಿ ಈ ವರೆಗೂ ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದ ಶಾಲೆಗಳಲ್ಲಿ ಸೋಮವಾರ (ಆ.23)ರಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರಿಗೆ ಸೂಚನೆ ನೀಡಿದ್ದು "ತಮ್ಮ ತಮ್ಮ ಜಿಲ್ಲೆಗಳಲ್ಲಿ ಶಾಲೆಗಳಿಗೆ ಭೇಟಿ ನೀಡಿ. ಶಿಕ್ಷಕರನ್ನು ಪ್ರೋತ್ಸಾಹಿಸಿ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಿ. ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ" ಎಂಬ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಅವರು ಟ್ವೀಟ್ ಮಾಡಿದ್ದು, ಶಾಲೆಗಳ ಆರಂಭಕ್ಕೆ ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.
ಸಚಿವರು ಶಾಲೆಗಳಲ್ಲಿ ಕೈಗೊಂಡ ಮುಂಜಾಗೃತಾ ಕ್ರಮಗಳನ್ನು ಪರಿಶೀಲಿಸಬೇಕು. ಪಾಲಕ-ಪೋಷಕರಲ್ಲಿ ವಿಶ್ವಾಸ ಮೂಡಿಸುವಂತೆ ಸಚಿವರಿಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ. ಮಕ್ಕಳು ಮತ್ತು ಪಾಲಕರು ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕು ಹಾಗೂ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು.
ಯಾವುದೇ ಆತಂಕ ಇಲ್ಲದೇ ಸರ್ಕಾರದ ಜತೆ ಸಹಕರಿಸುವಂತೆ ಪಾಲಕರು ಮತ್ತು ಪೋಷಕರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


