ರಾಜ್ಯ

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ವಿನಯ್ ಕುಲಕರ್ಣಿ ವಿರುದ್ದ 3 ಪ್ರಕರಣ ದಾಖಲು!

ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್​ನಲ್ಲಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿ ಸುಮಾರು 9 ತಿಂಗಳ ಬಳಿಕ ಹೊರಬಂದಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರು ಶನಿವಾರ ಜೈಲಿನಿಂದ ಹೊರಬಂದಿದ್ದು, ಜೈಲಿನಿಂದ ಹೊರಬರುತ್ತಿದ್ದಂತೆಯೇ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ವಿನಯ್ ಕುಲಕರ್ಣಿ ವಿರುದ್ದ 3 ಪ್ರಕರಣ ದಾಖಲು!
ವಿನಯ್ ಕುಲಕರ್ಣಿ
Published On :

ಬೆಳಗಾವಿ: ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸ್​ನಲ್ಲಿ ಬೆಳಗಾವಿಯ ಹಿಂಡಲಗಾ ಜೈಲು ಸೇರಿ ಸುಮಾರು 9 ತಿಂಗಳ ಬಳಿಕ ಹೊರಬಂದಿರುವ ಮಾಜಿ ಸಚಿವ ವಿನಯ ಕುಲಕರ್ಣಿಯವರು ಶನಿವಾರ ಜೈಲಿನಿಂದ ಹೊರಬಂದಿದ್ದು, ಜೈಲಿನಿಂದ ಹೊರಬರುತ್ತಿದ್ದಂತೆಯೇ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. 

ಕೋವಿಡ್ ನಿಯಮ ಉಲ್ಲಂಘನೆ, ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ವಿರುದ್ದ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆ.11ರಂದು ಸುಪ್ರೀಂಕೋರ್ಟ್ ಕೊಲೆ ಆರೋಪ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ, ಸಾಕ್ಷ್ಯನಾಶ ಪ್ರಕರಣಗಲ್ಲಿ ಜಾಮೀನು ಸಿಕ್ಕಿರಲಿಲ್ಲ. ಆ.19ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಸಾಕ್ಷ್ಯನಾಶ ಆರೋಪ ಪ್ರಕರಣದಲ್ಲಿಯೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಶನಿವಾರ ಬೆಳಿಗ್ಗೆ 10.45 ಸುಮಾರಿಗೆ ಸ್ಪೀಡ್ ಪೋಸ್ಟ್ ಮೂಲಕ ಜಾಮೀನು ಆದೇಶದ ಪ್ರತಿಯನ್ನು ಜೈಲು ಅಧಿಕಾರಿಗಳಿಗೆ ಹಸ್ತಾಂತರಿಸಿದ ನಂತರ ಕುಲಕರ್ಣಿಯನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು. 

ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಅವರನ್ನು ಸಾವಿರಾರು ಕಾರ್ಯಕರ್ತರು ಯುದ್ಧ ಗೆದ್ದ ಯೋಧನ ರೀತಿಯಲ್ಲಿ ಮೆರವಣಿಗೆ ಮಾಡಿ 50 ಕೆಜಿ ಸೇಬು ಹಣ್ಣಿನ ಹಾರ ಹಾಕಿ, ಹೂಮಳೆ ಸುರಿಸುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು. 

ಕುಲಕರ್ಣಿ ಸ್ವಾಗತಕ್ಕೆ ಸುಮಾರು 100ಕ್ಕೂ ಹೆಚ್ಚು ವಾಹನಗಳಲ್ಲಿ ಧಾರವಾಡ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಬೆಂಬಲಿಗರು ಆಗಮಿಸಿದ್ದರು. 

ಮೊದಲಿಗೆ ವಿನಯ್ ಹಿಂಡಲಗಾ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಜೈಲಿಂದ ದೇವಸ್ಥಾನದವರೆಗೆ ತೆರೆದ ವಾಹನದಲ್ಲಿ ಸುಮಾರು 4 ಕಿಮೀ ಬೃಹತ್ ಮೆರವಣಿಗೆ ಮಾಡಲಾಯಿತು. 

ಮೆರವಣಿಗೆ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಪೊಲೀಸರು, ವಿನಯ್ ಕುಲಕರ್ಣಿ ಮತ್ತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಒಟ್ಟು 300 ಮಂದಿ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. 

ವಿನಯ್ ಕುಲಕರ್ಣಿ ವಿರುದ್ಧವೇ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಕೋವಿಡ್ ನಿಯಮ ಉಲ್ಲಂಘಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು, ಜಿಲ್ಲಾಧಿಕಾರಿಗಳ ಸೆಕ್ಷನ್ 188 ಆದೇಶ ಉಲ್ಲಂಘನೆ ಮಾಡಿದ್ದು ಹಾಗೂ ಹಿಂಡಲಗಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೀಡಿದ ದೂರು ಸೇರಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ. 

ರಕ್ಷಾಬಂಧನಕ್ಕೆ ಒಂದು ದಿನ ಬಾಕಿ ಇರುವಾಗಲೇ ನನ್ನ ಸಹೋದರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಸಹೋದರನಿಗೆ ರಾಖಿ ಕಟ್ಟುವ ಸಲುವಾಗಿ ನಾನು ಕಾಯುತ್ತಿದೆ ಎಂದು ವಿನಯ್ ಕುಲಕರ್ಣಿ ಬಿಡುಗಡೆಯಾದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.