ರಾಜ್ಯೋತ್ಸವ ಪ್ರಶಸ್ತಿ ವಿಜೇತ ಖ್ಯಾತ ಡೋಲು ಕಲಾವಿದ, ಶತಾಯುಷಿ ಗುರುವ ಕೊರಗ ನಿಧನ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ ಅವರು ಭಾನುವಾರ ನಿಧನರಾಗಿದ್ದಾರೆ. ಅವರಿಗೆ 105 ವರ್ಷ ವಯಸ್ಸಾಗಿತ್ತು.

ಉಡುಪಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುರುವ ಕೊರಗ ಅವರು ಭಾನುವಾರ ನಿಧನರಾಗಿದ್ದಾರೆ. ಅವರಿಗೆ 105 ವರ್ಷ ವಯಸ್ಸಾಗಿತ್ತು.
ಡೋಲು ನುಡಿಸುವುದರ ಮೂಲಕ ಜನಪದ ಸಂಸ್ಕೃತಿಯ ಅನನ್ಯತೆಯನ್ನು ಇಡೀ ದೇಶಕ್ಕೇ ಪರಿಚಯಿಸಿರುವ ಶತಾಯುಷಿ ಡೋಲು (ಕಡ್ಡಾಯಿ) ಕಲಾವಿದ ಗುರುವ ಕೊರಗ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.
ಕೊರಗ ಬುಡಕಟ್ಟು ಸಮುದಾಯಕ್ಕೆ ಸೇರಿದ 105 ವರ್ಷ ವಯಸ್ಸಿನ ಗುರುವ ಕೊರಗ ಹಿರಿಯಡ್ಕದ ಗುಡ್ಡೆ ಅಂಗಡಿಯ ಬಲ್ಕೋಡಿ ನಿವಾಸಿಯಾಗಿದ್ದಾರೆ. ಡೋಲು ಕಲಾವಿದ ಹಿರಿಯಡ್ಕದ ತೋಮ ಮತ್ತು ತುಂಬೆ ದಂಪತಿ ಪುತ್ರರಾಗಿರುವ ಇವರು, 12ನೆ ವಯಸ್ಸಿನಿಂದಲೂ ಡೋಲು ಬಾರಿಸುವುದು ಮತ್ತು ಬುಟ್ಟಿ ಹೆಣೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದರು.
ತುಳುನಾಡಿನ ಜಾನಪದ ಸಂಸ್ಕೃತಿಯನ್ನು ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಅವರು ಮಾಡಿದ್ದಾರೆ. ಶತಾಷಿಯಾದರೂ ಇವರ ಡೋಲು ಭಾರಿಸುವ ಉತ್ಸಾಹ ಕುಂದಿರಲಿಲ್ಲ. ಹಿರಿಯಡ್ಕ, ಕಣಜಾರು ಜಾತ್ರೆ, ಗರಡಿ ಉತ್ಸವ, ಕೋಲ ಹಾಗೂ ಸುತ್ತ ಮುತ್ತಲ ಗ್ರಾಮಗಳಲ್ಲಿ ನಡೆಯುವ ಕಂಬಳಗಳಿಗೆ ಗುರುವರ ಡೋಲು ಬಡಿತ ವ್ಯಾಪಕ ಖ್ಯಾತಿಗಳಿಸಿತ್ತು.
ಇವರ ಸಾಧನೆಯನ್ನು ಗುರುತಿಸಿ 2017ನೆ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಗೌರವ ಪ್ರಶಸ್ತಿ ಮತ್ತು ಹಲವು ಗೌರವ ಪುರಸ್ಕಾರಕ್ಕೆ ಅವರು ಭಾಜನರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


