ರಾಜ್ಯ

ಬಾಗಲಕೋಟೆ: ಒಂದೇ ಕುಟುಂಬದ ಮೂವರು ನೀರು ಪಾಲು

ನದಿಯಲ್ಲಿ‌ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ ಶ್ರಿದೇವಿ ಮಾವಿನಮರದ (32) ಹಾಗೂ ಮಗಳು ನಂದಿನಿ (12) ಎಂದು ಗುರುತಿಸಲಾಗಿದೆ.

ಬಾಗಲಕೋಟೆ: ಒಂದೇ ಕುಟುಂಬದ ಮೂವರು ನೀರು ಪಾಲು
ಸಾಂದರ್ಭಿಕ ಚಿತ್ರ
Published On :

ಬಾಗಲಕೋಟೆ: ನದಿಯಲ್ಲಿ‌ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರದ ಬಳಿ ನಡೆದಿದೆ. ಮೃತರನ್ನು ವಿಶ್ವನಾಥ್ ಮಾವಿನ ಮರದ (40), ಪತ್ನಿ ಶ್ರಿದೇವಿ ಮಾವಿನಮರದ (32) ಹಾಗೂ ಮಗಳು ನಂದಿನಿ (12) ಎಂದು ಗುರುತಿಸಲಾಗಿದೆ.

ಮೃತರು ಮೂಲತಃ ಗುಳೇದಗುಡ್ಡ ತಾಲ್ಲೂಕಿನ ಕೊಟೇಕಲ್ ಗ್ರಾಮದವರಾಗಿದ್ದು, ಗದಗ ಜಿಲ್ಲೆಯ ರೋಣದಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.

ಶಿವಯೋಗ ಮಂದಿರಕ್ಕೆ ತೆರಳಿದ್ದ ಇರುವ ಉಪಹಾರ ಸೇವಿಸಲು ಮಲಪ್ರಭಾ ನದಿ ದಡದಲ್ಲಿ ಕುಳಿತಿದ್ದರು. ಉಪ ಹಾರ ಸೇವಿಸಿ ನಂದಿನಿ ಮಾವಿನ ಮರದ ನದಿಯಲ್ಲಿ ಕೈ ತೊಳೆಯಲು ಹೋದಾಗ ಜಾರಿ ನದಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ವಿಶ್ವನಾಥ್ ಹಾಗೂ ಶ್ರಿದೇವಿ ದಂಪತಿ ನೀರಿಗೆ ಇಳಿದಾಗ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಶ್ರೀದೇವಿ ಅವರ ಶವವನ್ನು ಹೊರತೆ ತೆಗೆಯಲಾಗಿದೆ. ಆದರೆ, ವಿಶ್ವನಾಥ್ ಹಾಗೂ ಅವರ ಮಗಳು ನಂದಿನಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಸ್ಥಳಕ್ಕೆ ಬಾದಾಮಿ ಪಿಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.