ದಾವಣಗೆರೆ: ಪಿಸ್ತೂಲು ಸ್ವಚ್ಛಗೊಳಿಸುವ ವೇಳೆ ಮಿಸ್ ಫೈರ್; ಕಾನ್ ಸ್ಟೇಬಲ್ ಸಾವು
ಆಕಸ್ಮಿಕ ಫೈರಿಂಗ್‌ನಿಂದ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ದಾವಣಗೆರೆ: ಆಕಸ್ಮಿಕ ಫೈರಿಂಗ್‌ನಿಂದ ಗುಂಡು ತಗುಲಿ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೇಬಲ್ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಸೋಮವಾರ ಬೆಳಗ್ಗೆ ಅವಘಡ ಸಂಭವಿಸಿದೆ.
ಚೇತನ್ (28) ಸಾವನ್ನಪ್ಪಿದ ಪೊಲೀಸ್ ಕಾನ್‌ಸ್ಟೇಬಲ್. ಬೆಳಗ್ಗೆಯ ತರಬೇತಿ ಮುಗಿಸಿ ಆಯುಧ ಸ್ವಚ್ಛ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಫೈರಿಂಗ್ ಆಗಿ ಗುಂಡು ತಗುಲಿದೆ. ಘಟನೆ ಬಳಿಕ ತುರ್ತಾಗಿ ದಾವಣಗೆರೆಯ ಸಿಟಿ ಸೆಂಟ್ರಲ್ ಆಸ್ಪತ್ರೆಗೆ ಚೇತನ್ ಅವರನ್ನು ಸಾಗಿಸಲಾಯಿತು.
ಆದರೆ, ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ಚೇತನ್ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಲಹಾಳ್ ಗ್ರಾಮದ ನಿವಾಸಿಯಾಗಿದ್ದ ಚೇತನ್, 2012ರಲ್ಲಿ ದಾವಣಗೆರೆ ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ್ದರು. ಘಟನೆ ಬಗ್ಗೆ ಮಾಹಿತಿ ತಿಳಿದ ಪೂರ್ವ ವಲಯ ಐಜಿಪಿ ಎಸ್ ರವಿ ಹಾಗೂ ಎಸ್‌ಪಿ ಸಿಬಿ ರಿಷ್ಯಂತ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


