ಮಂಗಳೂರು: ವಿಶ್ವ ಹಿಂದೂ ಪರಿಷದ್ ಮುಖಂಡರ ಮೀನು ಮಾರಾಟ ಮಳಿಗೆಗೆ ದುಷ್ಕರ್ಮಿಗಳಿಂದ ಬೆಂಕಿ
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೋಮು ಸೌಹಾರ್ದತೆ ಕದಡುವ ಸಲುವಾಗಿ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಿದ್ದಾರೆ.

ಮಂಗಳೂರು: ಅಪರಿಚಿತ ದುಷ್ಕರ್ಮಿಗಳು ವಿಶ್ವ ಹಿಂದೂ ಪರಿಷದ್ (ವಿ ಎಚ್ ಪಿ) ಮುಖಂಡರಿಗೆ ಸೇರಿದ ಮೀನು ಮಾರಾಟ ಅಂಗಡಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಉಪ್ಪಿನಂಗಡಿಯ ಹಳೇಗೇಟು ಎಂಬಲ್ಲಿ ಈ ಘಟನೆ
ನಡೆದಿದೆ. ಭಾನುವಾರ ರಾತ್ರಿ ಬೆಂಕಿ ಹಚ್ಚಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ.
ರಾಜ್ಯ ಹೆದ್ದಾರಿಯ ಸಮೀಪದಲ್ಲಿ ಈ ಅಂಗಡಿ ಇತ್ತು. ಅಂಗಡಿ ಮಾಲೀಕ ಅಶೋಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಅಂಗಡಿಯಲ್ಲಿ ಮೀನು ಮತ್ತು ಮಂಜುಗಡ್ಡೆ ಇಡಲಾಗಿತ್ತು ಎಂದಿದ್ದಾರೆ.
ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಕೋಮು ಸೌಹಾರ್ದತೆ ಕದಡುವ ಸಲುವಾಗಿ ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಿದ್ದಾರೆ. ಪುತ್ತೂರು ಶಾಸಕರು ಕೂಡಾ ಸ್ಥಳಕ್ಕೆ ಆಗಮಿಸಿದ್ದು, ಶೀಘ್ರವಾಗಿ ದುಷ್ಕರ್ಮಿಗಳನ್ನು ಪತ್ತೆ ಹಚ್ಚುವಂತೆ ಪುತ್ತೂರು ಡಿ ವೈ ಎಸ್ ಪಿ ಅವರಲ್ಲಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


