ರಾಜ್ಯ

ಬೆಂಗಳೂರು: ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಕಾರ್ಮಿಕರಿಬ್ಬರ ಸಜೀವ ದಹನ, ನಾಲ್ವರಿಗೆ ಗಾಯ

ಮಾಗಡಿ ರಸ್ತೆಯಲ್ಲಿರುವ ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದ್ದು ಘಟನೆಯಲ್ಲಿ ಇಬ್ಬರು ಸಜೀವ ದಹನವಾಗಿದ್ದಾರೆ.

ಬೆಂಗಳೂರು: ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; ಕಾರ್ಮಿಕರಿಬ್ಬರ ಸಜೀವ ದಹನ, ನಾಲ್ವರಿಗೆ ಗಾಯ
ಸಂಗ್ರಹ ಚಿತ್ರ
Published On :

ಬೆಂಗಳೂರು: ಎಂಎಂ ಫುಡ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದ ಸ್ಪೋಟ ಸಂಭವಿಸಿ ಇಬ್ಬರೂ ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಮಾಗಡಿ ರಸ್ತೆಯಲ್ಲಿರುವ ಗೋಪಾಲಪುರ ಬಳಿ ನಡೆದಿದೆ.

ಬಿಹಾರ ಮೂಲದ ಸೌರಭ್ ಹಾಗೂ ಮನೀಶ್ ಮೃತ ಕಾರ್ಮಿಕರು. ಶಾಂತಿ, ಮನೀಷ್ ಸೇರಿ ನಾಲ್ವರು ಗಾಯಗೊಂಡಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ' ಎಂದು ಮೂಲಗಳು ಹೇಳಿವೆ.

ಸೋಮವಾರ ಮಧ್ಯಾಹ್ನ 1.45ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ್ ಭೇಟಿ‌ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಮಾತನಾಡಿದ ಅವರು, ಆಹಾರ ತಯಾರಿಸುವ ಬಾಯ್ಲರ್ ಹೆಚ್ಚು ಹೀಟ್ ಆಗಿ ಸ್ಫೋಟಗೊಂಡ ಪರಿಣಾಮ ಸಿಲಿಂಡರ್ ಕೂಡಸ್ಫೋಟವಾಗಿದೆ‌. ಘಟನೆಯಲ್ಲಿ‌ ಮನೀಶ್ ಹಾಗೂ ಸೌರಭ್ ಎಂಬುವವರು ಮೃತಪಟ್ಟಿದ್ದಾರೆ ಎಂದರು.

ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಪಾಲಪುರ ಚಿಕ್ಕ ಪ್ರದೇಶ‌ವಾಗಿದ್ದು, ವಸತಿ ಪ್ರದೇಶದಲ್ಲಿ ಫ್ಯಾಕ್ಟರಿ ಪ್ರಾರಂಭ ನಡೆಸಲು‌ ಪರವಾನಗಿ ಪಡೆದಿದ್ದರಾ ಎಂಬುದರ ಕುರಿತು ಪರಿಶೀಲಿಸಬೇಕಿದೆ‌ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.