2 ವರ್ಷಗಳ ನಂತರ ವಿಧಾನ ಪರಿಷತ್ ಸದಸ್ಯರ 600 ಕೋಟಿ ರು. ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ
ಕೊರೋನಾ ಸಾಂಕ್ರಾಮಿಕ ರೋಗದಿಂದ ಕಳೆದ 2 ವರ್ಷಗಳಿಂದ ತಡೆ ಹಿಡಿಯಲಾಗಿದ್ದ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗದಿಂದ ಕಳೆದ 2 ವರ್ಷಗಳಿಂದ ತಡೆ ಹಿಡಿಯಲಾಗಿದ್ದ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಮೇಲ್ಮನೆಯ 75 ಸದಸ್ಯರಿಗೆ 600 ಕೋಟಿ ರು ಹಣವನ್ನು ಬಿಡುಗಡೆ ಮಾಡಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರ ಅನುದಾನದ ಹಣ ಬಿಡುಗಡೆ ಮಾಡಿದೆ, ನಾನು ಮಧ್ಯ ಪ್ರವೇಶಿಸಿದ ನಂತರ ಸರ್ಕಾರ ಈ ನಿರ್ಧಾರ ಮಾಡಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಇನ್ನೂ ಹಣ ಬಿಡುಗಡೆಯಾಗಿರುವ ವಿಷಯವನ್ನು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಖಚಿತ ಪಡಿಸಿದ್ದಾರೆ. ಕೌನ್ಸಿಲ್‌ನ 25 ಸ್ಥಾನಗಳಿಗೆ ನಾಲ್ಕು ತಿಂಗಳ ಅವಧಿಯಲ್ಲಿ ಚುನಾವಣೆಗಳು ನಡೆಯಲಿದ್ದು, ಈ ನಿಧಿ ಹಣ ಅವರಿಗೆ ಬಹಳ ಮುಖ್ಯ. ಹಿಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಣ ಬಿಡುಗಡೆ ಮಾಡುವ ಭರವಸೆ ನೀಡಿದ್ದರು, ಆದರೆ ಆರ್ಥಿಕ ಪರಿಸ್ಥಿತಿಯಿಂದಾಗಿ ಸಾಧ್ಯವಾಗಲಿಲ್ಲ. ಹಣ ಬಿಡುಗಡೆ ಶಾಸಕರಿಗೆ ಸ್ವಾಗತದಾಯಕ ಎಂದು ಮೋಹನ್ ಕೊಂಡಜ್ಜಿ ತಿಳಿಸಿದ್ದಾರೆ.
ಶಾಸಕರ ಹಣ ಬಿಡುಗಡೆ ಬಗ್ಗೆ ಜಿಲ್ಲಾಧಿಕಾರಿ ಖಚಿತಪಡಿಸಬೇಕು ಎಂದು ಮಾಜಿ ಮಹಾಪೌರ ಪಿ.ಆರ್ ರಮೇಶ್ ಹೇಳಿದ್ದಾರೆ. ಮೊದಲು ಸರ್ಕಾರವು ಪ್ರತಿ ಮೂರು ತಿಂಗಳಿಗೊಮ್ಮೆ ಹಣವನ್ನು ಬಿಡುಗಡೆ ಮಾಡುತ್ತಿತ್ತು, ಆದರೆ 2019 ರಲ್ಲಿ ಸಾಂಕ್ರಾಮಿಕದ ಕಾರಣ ಹಣವನ್ನು ನಿಯಮಿತವಾಗಿ ಬಿಡುಗಡೆ ಮಾಡಲಾಗಲಿಲ್ಲ. ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಪರಿಗಣಿಸಿ ಅನುದಾನ ಬಿಡುಗಡೆ ಮಾಡಲಾಗಿದೆ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


