ರಾಜ್ಯದಲ್ಲಿಂದು ಕೊರೋನಾದಿಂದ 29 ಸಾವು: 1,259 ಹೊಸ ಪ್ರಕರಣಗಳು, 1,701 ಸೋಂಕಿತರು ಗುಣಮುಖ
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1, 259 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 2,94,1026ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 1, 259 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿನ ಒಟ್ಟು ಪ್ರಕರಣಗಳ ಸಂಖ್ಯೆ 2,94,1026ಕ್ಕೆ ಏರಿಕೆಯಾಗಿದೆ.
ಇಂದು 1,701 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 2,88,4032ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 19, 784 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
29 ಸೋಂಕಿತರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 37, 184ಕ್ಕೆ ಏರಿಕೆಯಾಗಿದೆ. ಸೋಂಕಿನ ದರ ಶೇ 0.65 ರಷ್ಟಿದ್ದು, ಮರಣ ಪ್ರಮಾಣ ಶೇ. 2.30 ರಷ್ಟಿದೆ. ಬೆಂಗಳೂರಿನಲ್ಲಿ 295 ಹೊಸ ಪ್ರಕರಣ, 371 ಗುಣಮುಖ ಹಾಗೂ 11 ಸಾವು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


