ರಾಜ್ಯ

ಗೋ ಹತ್ಯಾ ನಿಷೇಧ ಕಾಯ್ದೆ ಹಿಂಪಡೆಯಲು ಪ್ರಗತಿಪರ ಸಂಘಟನೆಗಳ ಆಗ್ರಹ

ಲಾಕ್ ಡೌನ್ ಸಮಯದಲ್ಲಿ ಶಾಲೆಗಳು ಮುಚ್ಚಲ್ಪಟ್ಟಿದ್ದರಿಂದ ಮಕ್ಕಳಿಗೆ ಪೌಷ್ಟಿಕ ಆಹಾರ ಲಭ್ಯವಾಗಿರಲಿಲ್ಲ. ಇಂಥಾ ಸಂದರ್ಭದಲ್ಲಿ ಅಗ್ಗದ ದರದಲ್ಲಿ ಸಿಗುತ್ತಿದ್ದ ಪೋಷಕಾಂಶಯುಕ್ತ ಆಹಾರವನ್ನೂ ಸಿಗದಂತೆ ಮಾಡಿರುವುದು ವೈಜ್ಞಾನಿಕವಾಗಿಯೂ ಸರಿಯಲ್ಲ

ಗೋ ಹತ್ಯಾ ನಿಷೇಧ ಕಾಯ್ದೆ ಹಿಂಪಡೆಯಲು ಪ್ರಗತಿಪರ ಸಂಘಟನೆಗಳ ಆಗ್ರಹ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯಬೇಕೆಂದು 'ಆಹಾರ ನಮ್ಮ ಹಕ್ಕು' ಸಂಘಟನೆಯ ಕಾರ್ಯಕರ್ತರು, ರೈತರು, ಪ್ರಗತಿಪರ ಸಂಘಟನೆಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿವೆ. 

ಗೋಹತ್ಯಾ ನಿಷೇಧದಿಂದಾಗಿ ಪರಿಶಿಷ್ಟ ಜಾತಿ, ಆದಿವಾಸಿ, ಮುಸ್ಲಿಂ ಸೇರಿದಂತೆ ಇತರೆ ಅಲ್ಪಸಂಖ್ಯಾತ ಸಮುದಾಯದ ಜನರ ಆಹಾರ ಕಿತ್ತುಕೊಂಡಂತಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಮುಖ್ಯಸ್ಥರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. 

ಲಾಕ್ ಡೌನ್ ಸಮಯದಲ್ಲಿ ಶಾಲೆಗಳು ಮುಚ್ಚಲ್ಪಟ್ಟಿದ್ದರಿಂದ ಮಕ್ಕಳಿಗೆ ಪೌಷ್ಟಿಕ ಆಹಾರ ಲಭ್ಯವಾಗಿರಲಿಲ್ಲ. ಇಂಥಾ ಸಂದರ್ಭದಲ್ಲಿ ಅಗ್ಗದ ದರದಲ್ಲಿ ಸಿಗುತ್ತಿದ್ದ ಪೋಷಕಾಂಶಯುಕ್ತ ಆಹಾರವನ್ನೂ ಸಿಗದಂತೆ ಮಾಡಿರುವುದು ವೈಜ್ಞಾನಿಕವಾಗಿಯೂ ಸರಿಯಲ್ಲ ಎಂದ ಸಂಘಟನೆಗಳ ಸದಸ್ಯರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. 

ಗೋ ಮಾಂಸ ಪೋಷಕಾಂಶಯುಕ್ತ ಆಹಾರ. ಅನೀಮಿಯ ಹೊಡೆದೋಡಿಸುವಲ್ಲಿ ಪ್ರಧಾನ ಪಾತ್ರವನ್ನು ವಹಿಸುತ್ತದೆ. ಅಲ್ಲದೆ ಅದರಲ್ಲಿ ವಿಟಮಿನ್ ಎ, ಬಿ ಕಾಂಪ್ಲೆಕ್ಸ್, ಜಿನ್ಕ್ ಇದ್ದು ಪ್ರೋಟೀನ್ ಕೊರತೆಯನ್ನೂ ನೀಗಿಸುತ್ತದೆ ಎಂದು ಸದಸ್ಯರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸದಸ್ಯರು. ಅಲ್ಪಸಂಖ್ಯಾತ ಸಮುದಾಯಗಳ ಜನರನ್ನು ಗುರಿಯಾಗಿಸಲಾಗುತ್ತಿದೆ. ಗೋಹತ್ಯಾ ನಿಷೇಧ ಕಾಯ್ದೆ ಈ ವರ್ಗದವರನ್ನು ಇನ್ನಷ್ಟು ದೈಹಿಕವಾಗಿ ದುರ್ಬಲರನ್ನಾಗಿ ಮಾಡುವುದಲ್ಲದೆ ಆರ್ಥಿಕವಾಗಿ ಅಶಕ್ತರನ್ನಾಗಿ ಮಾಡುತ್ತದೆ ಎಂದು ಪ್ರಗತಿಪರ ಸಂಘಟನೆಗಳ ಸದಸ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.