ರಾಜ್ಯ

ಯತ್ನಾಳ್ ಕಚೇರಿಗೆ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ: ಕಾಂಗ್ರೆಸ್ ಕಾರ್ಯಕರ್ತರ ವಶ

ಶಾಸಕರ ಭವನದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೊಠಡಿಯ ಬಾಗಿಲಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಯತ್ನಾಳ್ ಕಚೇರಿಗೆ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ: ಕಾಂಗ್ರೆಸ್ ಕಾರ್ಯಕರ್ತರ ವಶ
ಯತ್ನಾಳ್ ಕಚೇರಿಗೆ ಭಿತ್ತಿಪತ್ರ ಅಂಟಿಸಿದ ಕಾಂಗ್ರೆಸ್ ಕಾರ್ಯಕರ್ತರು
Published On :

ಬೆಂಗಳೂರು: ಶಾಸಕರ ಭವನದಲ್ಲಿರುವ ಬಸನಗೌಡ ಪಾಟೀಲ್ ಯತ್ನಾಳ್ ಕೊಠಡಿಯ ಬಾಗಿಲಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಿನ್ ಲಾಡೆನ್ ಮುಖ ಹೋಲುವ ಭಿತ್ತಿಪತ್ರ ಅಂಟಿಸುವ ಮೂಲಕ ಪ್ರತಿಭಟಿಸಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಬಸನಗೌಡ ಪಾಟೀಲ್ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಬೆಂಗಳೂರು ನಗರ ಕಾಂಗ್ರೆಸ್ ಕಾರ್ಯಕರ್ತರು, ಶಾಸಕರ ಭವನದಲ್ಲಿರುವ ಯತ್ನಾಳ್ ಕೊಠಡಿಗೆ ಸೋಮವಾರ ಬಿನ್ ಲಾಡೆನ್ ಮುಖ ಹೋಲುವ ಯತ್ನಾಳ್ ಭಾವಚಿತ್ರವಿರುವ ಭಿತ್ತಿಪತ್ರ ಅಂಟಿಸಿ ಯತ್ನಾಳರ ತಂದೆ ಬಿನ್ ಲಾಡೆನ್ನೋ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇಂದು ಭಿತ್ತಿಪತ್ರಗಳನ್ನು ತೆಗೆದುಹಾಕಿರುವ ಶಾಸಕರ ಭವನ ಠಾಣಾ ವ್ಯಾಪ್ತಿಯ ಪೊಲೀಸರು ಚೆಲುವರಾಜ ಎನ್ನುವ ಕಾಂಗ್ರೆಸ್ ಕಾರ್ಯಕರ್ತ ಸೇರಿದಂತೆ ಮತ್ತಿತ್ತರರನ್ನು ಬಂಧಿಸಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.