ಬೆಂಗಳೂರು: ಆನ್‌ಲೈನ್‌ನಲ್ಲಿ ಖರೀದಿಸಿದ್ದ ಚಾಕುವಿನಿಂದ ನಡುರಸ್ತೆಯಲ್ಲೇ ಯುವತಿಗೆ ಇರಿದ ಪಾಗಲ್ ಪ್ರೇಮಿ
ಪ್ರೀತಿಗೆ ಒಲ್ಲೆ ಅಂದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ನಡುರಸ್ತೆಯಲ್ಲೇ ಚೂರಿಯಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.

ಬೆಂಗಳೂರ: ಪ್ರೀತಿಗೆ ಒಲ್ಲೆ ಅಂದ ಯುವತಿಗೆ ಪಾಗಲ್ ಪ್ರೇಮಿಯೊಬ್ಬ ನಡುರಸ್ತೆಯಲ್ಲೇ ಚೂರಿಯಿಂದ ಇರಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.
ಬಾಗಲಗುಂಟೆಯ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ಯುವತಿ ಕಾಲೇಜಿಗೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ಪಾಗಲ್ ಪ್ರೇಮಿ ಉದಯ್ ಕುಮಾರ್ ಚೂರಿಯಿಂದ ಕುತ್ತಿಗೆ ಹಾಗೂ ತೊಡೆ ಭಾಗಕ್ಕೆ ಇರಿದಿದ್ದಾನೆ.
ಯುವತಿ ನೋವಿನಿಂದ ಕುಸಿದುಬಿದ್ದ ನಂತರ ಉದಯ್ ಕುಮಾರ್ ಗೋಡೆಗೆ ತಲೆ ಚಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹಲ್ಲೆ ಸಂಬಂಧ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ಉದಯ್ ಕುಮಾರ್ ಮತ್ತು ಸಂತ್ರಸ್ತೆ ಒಂದೇ ಕಾಲೇಜಿನಲ್ಲಿ ಪಿಯು ಒಟ್ಟಿಗೆ ಓದಿದ್ದರು. ಆದರೆ ಪದವಿಗಾಗಿ ಬೇರೆ ಕಾಲೇಜುಗಳಿಗೆ ಸೇರಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ನಡುವೆ ಭಿನ್ನಾಭಿಪ್ರಾಯಗಳಿದ್ದವು. ಹೀಗಾಗಿ ಆತ ಯುವತಿ ಉದಯ್ ಕುಮಾರ್ ಪ್ರೀತಿಯನ್ನು ನಿರಾಕರಿಸಿದ್ದಳು ಎನ್ನಲಾಗಿದೆ.
ಕುಮಾರ್ ತನ್ನ ಗೆಳತಿಯ ಮೇಲೆ ಹಲ್ಲೆ ಮಾಡುವ ಉದ್ದೇಶದಿಂದ ಆನ್ ಲೈನ್ ನಲ್ಲಿ ಬಟನ್ ಚಾಕುವನ್ನು ಆರ್ಡರ್ ಮಾಡಿದ್ದ ಎನ್ನಲಾಗಿದೆ. ಬಾಲಕಿಯ ಭುಜಕ್ಕೆ ಇರಿತದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಘಟನೆ ವೇಳೆ ಯುವತಿಯ ಸಹೋದರನಿಗೂ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


