ರಾಜ್ಯ

ಶಿರಸಿ: ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆ ಸಾವು

ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಬಳಿ ನಡೆದಿದೆ.

ಶಿರಸಿ: ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆ ಸಾವು
ಕಪ್ಪು ಚಿರತೆ
Published On :

ಶಿರಸಿ: ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಬಳಿ ನಡೆದಿದೆ.

4 ವರ್ಷದ ಹೆಣ್ಣು ಕಪ್ಪು ಚಿರತೆ ಮೃತಪಟ್ಟಿದ್ದು, ಬನವಾಸಿ ಅರಣ್ಯ ವ್ಯಾಪ್ತಿಯಲ್ಲಿ ಪತ್ತೆಯಾದ ಮೊದಲ ಕಪ್ಪು ಚಿರತೆ ಇದಾಗಿದೆ ಎಂದು ತಿಳಿದು ಬಂದಿದೆ.

ನಸುಕಿನ ಜಾವ ಕಪ್ಪು ಚಿರತೆಯು ಬೇಲಿಗೆ ಸಿಲುಕಿ ಒದ್ದಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ವಿಷಯ ರವಾನಿಸಿದ್ದರು. ಉರುಳು ತಂತಿಯಿಂದ ಸೊಂಟದ ಭಾಗಕ್ಕೆ ತೀವ್ರ ಪೆಟ್ಟಾದ್ದ ಪರಿಣಾಮ ಚಿರತೆ ಮೃತಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.