ರಾಜ್ಯ

ನಾನು ಪೇಪರ್ ಓದಲ್ಲ, ನನಗೆ ಮೈಸೂರಿನ ಗ್ಯಾಂಗ್ ರೇಪ್ ಘಟನೆ ಬಗ್ಗೆ ಗೊತ್ತಿಲ್ಲ: ಸಂಸದ ಜಿ.ಎಂ. ಸಿದ್ದೇಶ್ವರ್

ನಾನು ಪೇಪರ್ ಓದಲ್ಲ, ನನಗೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಘಟನೆ ಬಗ್ಗೆ ಗೊತ್ತಿಲ್ಲ ಎಂದು ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ್ ಉಡಾಫೆಯ ಹೇಳಿಕೆ ನೀಡಿದ್ದಾರೆ.

ನಾನು ಪೇಪರ್ ಓದಲ್ಲ, ನನಗೆ ಮೈಸೂರಿನ ಗ್ಯಾಂಗ್ ರೇಪ್ ಘಟನೆ ಬಗ್ಗೆ ಗೊತ್ತಿಲ್ಲ: ಸಂಸದ ಜಿ.ಎಂ. ಸಿದ್ದೇಶ್ವರ್
ಜಿ ಎಂ ಸಿದ್ದೇಶ್ವರ್
Published On :

ದಾವಣಗೆರೆ: ನಾನು ಪೇಪರ್ ಓದಲ್ಲ, ನನಗೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಘಟನೆ ಬಗ್ಗೆ ಗೊತ್ತಿಲ್ಲ ಎಂದು ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ್ ಉಡಾಫೆಯ ಹೇಳಿಕೆ ನೀಡಿದ್ದಾರೆ.

ಇಂದು ಸುದ್ದಿಗಾರರು ಚಿತ್ರದುರ್ಗದಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೂರು ದಿನಗಳ ಹಿಂದೆ ನಡೆದ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧಪಟ್ಟಂತೆ ಕೇಳಿದಾಗ ನನಗೇನು ಗೊತ್ತು, ನನ್ನ ಜಿಲ್ಲೆಯಲ್ಲಿ ಆದ ಘಟನೆಯಾದರೆ ನಾನು ಹೇಳಬಲ್ಲೆ, ಎಲ್ಲೋ ಬೇರೆ ಜಿಲ್ಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಆದ ಘಟನೆ ಬಗ್ಗೆ ನನಗೆ ಗೊತ್ತಿಲ್ಲ, ನಾನು ಪೇಪರ್ ಓದುವುದಿಲ್ಲ, ಬೆಳಗ್ಗೆ ಮನೆ ಬಿಟ್ಟರೆ ಮತ್ತೆ ಮನೆ ಸೇರುವುದು ರಾತ್ರಿ 11 ಗಂಟೆಗೆ, ಅದೆಲ್ಲ ನನಗೆ ಗೊತ್ತಿಲ್ಲ ಎಂದರು.

ಒಬ್ಬ ಜನಪ್ರತಿನಿಧಿಯಾಗಿ, ರಾಜ್ಯದ ಪ್ರಮುಖ ರಾಜಕಾರಣಿಯಾಗಿ ಆಡಳಿತ ಪಕ್ಷ ಬಿಜೆಪಿಯ ಹಿರಿಯ ಸದಸ್ಯರಾಗಿ ಈ ರೀತಿ ಬೇಜವಾಬ್ದಾರಿ, ಉಡಾಫೆ ಹೇಳಿಕೆ ನೀಡಿರುವುದು ಅಚ್ಚರಿಯನ್ನುಂಟುಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.