ಕೋವಿಡ್ ಲಸಿಕಾ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ: ಶೇ.96ರಷ್ಟು ಗುರಿ ಸಾಧನೆ
ಬಿಬಿಎಂಪಿ ವ್ಯಾಪ್ತಿಯ ಎಲ್ಲ 8 ವಲಯಗಳಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಕೋವಿಡ್ ಲಸಿಕಾ ಮೇಳ’ದಲ್ಲಿ ನಿಗದಿತ ಗುರಿಗಿಂತ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಲ್ಲ 8 ವಲಯಗಳಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ‘ಕೋವಿಡ್ ಲಸಿಕಾ ಮೇಳ’ದಲ್ಲಿ ನಿಗದಿತ ಗುರಿಗಿಂತ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ.
ಲಸಿಕಾ ಮೇಳದಲ್ಲಿ 1.25 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಖಾಸಗಿ ಕೇಂದ್ರಗಳು ಸೇರಿದಂತೆ 1.64 ಲಕ್ಷ ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.
ಆಯಾ ವಾರ್ಡ್‌ಗಳಲ್ಲಿ ಆರೋಗ್ಯ ವೈದ್ಯಾಧಿಕಾರಿಗಳು ಅಲ್ಲಿಯ ಬೇಡಿಕೆಗೆ ತಕ್ಕಂತೆ ಯೋಜನೆ ರೂಪಿಸಿಕೊಂಡ ಶಿಬಿರ ನಡೆಸಿದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ವಾರ್ಡ್ ಕಚೇರಿ, ಸರ್ಕಾರಿ ಆಸ್ಪತ್ರೆಗಳು, ಶಾಲಾ, ಕಾಲೇಜು ಆವರಣ, ಕಲ್ಯಾಣ ಮಂಟಪ, ಕಟ್ಟಡಗಳ ನಿರ್ಮಾಣದ ಸ್ಥಳ, ಅಪಾರ್ಟ್‌ಮೆಂಟ್ ಸಮುಚ್ಚಯ, ಕಾರ್ಖಾನೆಗಳು ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಲಸಿಕಾ ಮೇಳವನ್ನು ನಡೆಸಲಾಯಿತು.
ಬೆಸ್ಕಾಂ ಸಿಬ್ಬಂದಿ, ಮಾಲ್‌ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ಭದ್ರತಾ ಸಿಬ್ಬಂದಿ, ಕಟ್ಟಡ ನಿರ್ಮಾಣ ಕಾರ್ಮಿಕರು, ಅನಾಥಾಶ್ರಮದಲ್ಲಿರುವವರು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು.
ಇದರಂತೆ ಬಿಬಿಎಂಪಿ ಪೂರ್ವ ವಲಯದಲ್ಲಿ ಶೇ.100, ದಕ್ಷಿಣ ವಲಯದಲ್ಲಿ ಶೇ.101%, ಪಶ್ಚಿಮ ವಲಯದಲ್ಲಿ ಶೇ.103 ಮತ್ತು ಬೊಮ್ಮನಹಳ್ಳಿಯಲ್ಲಿ ಶೇ.121, ಮಹಾದೇವಪುರದಲ್ಲಿ ಶೇ.85, ರಾಜರಾಜೇಶ್ವರಿ ನಗರದಲ್ಲಿ ಶೇ.75, ಯಲಹಂಕದಲ್ಲಿ ಶೇ.74 ಮತ್ತು ದಾಸರಹಳ್ಳಿಯಲ್ಲಿ ಶೇ.69 ಗುರಿ ಸಾಧಿಸಲಾಗಿದೆ.
ನಿನ್ನೆ ಒಂದೇ ದಿನ 71,564 ಜನರು ಮೊದಲ ಡೋಸ್ ಲಸಿಕೆ ತೆಗೆದುಕೊಂಡಿದ್ದರೆ, 93,223 ಮಂದಿ ಎರಡನೇ ಡೋಸ್ ಲಸಿಕೆ ತೆಗೆದುಕೊಂಡಿದ್ದಾರೆ. ಇದರಂತೆ ಒಟ್ಟಾರೆ 1,64,787 ಮಂದಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆದುಕೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


