ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಬಂಧಿತ ಐವರು ಆರೋಪಿಗಳು 10 ದಿನ ಪೊಲೀಸ್ ಕಸ್ಟಡಿಗೆ, ತಪ್ಪಿಸಿಕೊಂಡಿರುವ ಇಬ್ಬರಿಗೆ ತೀವ್ರ ಶೋಧ
ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಂಧಿತರಾಗಿರುವ ತಮಿಳು ನಾಡು ಮೂಲದ ಐವರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೊಪ್ಪಿಸಲಾಗಿದೆ.

ಮೈಸೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಂಧಿತರಾಗಿರುವ ತಮಿಳು ನಾಡು ಮೂಲದ ಐವರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೊಪ್ಪಿಸಲಾಗಿದೆ.
ಮೊನ್ನೆ ಆಗಸ್ಟ್ 24ರಂದು ಸಾಯಂಕಾಲ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿದ್ದು ಬಂಧಿತ ಐವರು ಆರೋಪಿಗಳನ್ನು 10 ದಿನ ಪೊಲೀಸ್ ಕಸ್ಟಡಿಗೊಪ್ಪಿಸಿ ಮೈಸೂರಿನ 3ನೇ ಜೆಎಂಎಫ್ ಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಆರೋಪಿಗಳನ್ನು ನಿನ್ನೆ ನ್ಯಾಯಾಧೀಶರ ಎದುರು ಪೊಲೀಸರು ಹಾಜರುಪಡಿಸಿದ್ದರು. ಈ ಸಂದರ್ಭದಲ್ಲಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡರು. ಪೊಲೀಸರ ಮನವಿ ಪುರಸ್ಕರಿಸಿದ ನ್ಯಾಯಾಧೀಶರು 10 ದಿನಗಳ ಕಾಲ ತಮ್ಮ ವಶದಲ್ಲಿರಿಸಿಕೊಳ್ಳಲು ಪೊಲೀಸರಿಗೆ ಅನುಮತಿ ನೀಡಿದರು.
ಇಂದಿನಿಂದ ಪೊಲೀಸರು ಐವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಿದ್ದು ಇನ್ನು ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


