ರಾಮನಗರ: ಭೀಕರ ರಸ್ತೆ ಅಪಘಾತ: ಮೂವರ ಸಾವು
ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ರಾಮನಗರದ ರಾಯರದೊಡ್ಡಿ ಬಳಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಶನಿವಾರ ತಡರಾತ್ರಿ ಸಂಭವಿಸಿದೆ.

ರಾಮನಗರ: ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ರಾಮನಗರದ ರಾಯರದೊಡ್ಡಿ ಬಳಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಶನಿವಾರ ತಡರಾತ್ರಿ ಸಂಭವಿಸಿದೆ.
ಮೃತರನ್ನು ಬಾಲಗೇರಿಯ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನ ಸವಾರರಿಬ್ಬರ ಅತೀ ವೇಗದ ಚಾಲನೆಯೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು. ಮೃತ ಯುವಕರ ಶವವನ್ನು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


