ರಾಜ್ಯದಾದ್ಯಂತ ವಾರದಲ್ಲೊಂದು ದಿನ ಕೋವಿಡ್ ಲಸಿಕೆ ಉತ್ಸವ: ಸಚಿವ ಸುಧಾಕರ್
ರಾಜ್ಯಾದ್ಯಂತ ವಾರದಲ್ಲಿ ಒಂದು ದಿನ ಕೋವಿಡ್ ಲಸಿಕೆ ಉತ್ಸವ ಆಯೋಜಿಸಲಾಗುವುದು. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದಕ್ಕೆ ಚಾಲನೆ ನೀಡುವರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದ್ದಾರೆ.

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ವಾರದಲ್ಲಿ ಒಂದು ದಿನ ಕೋವಿಡ್ ಲಸಿಕೆ ಉತ್ಸವ ಆಯೋಜಿಸಲಾಗುವುದು. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದಕ್ಕೆ ಚಾಲನೆ ನೀಡುವರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಶನಿವಾರ ಹೇಳಿದ್ದಾರೆ.
ಶಿಡ್ಲಘಟ್ಟ ತಾಲ್ಲೂಕಿನ ಸಾದಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆ.27ರವರೆಗೆ ಒಟ್ಟು 4 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ‘ನಾನು ಮತ್ತು ಮುಖ್ಯಮಂತ್ರಿ ಅವರು ಕೇಂದ್ರ ಆರೋಗ್ಯ ಸಚಿವರನ್ನು ಇತ್ತೀಚೆಗೆ ಭೇಟಿ ಮಾಡಿ ರಾಜ್ಯಕ್ಕೆ ನಿತ್ಯ 5 ಲಕ್ಷಕ್ಕಿಂತಲೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಿಕೊಂಡಿದ್ದೇವೆಂದು ಹೇಳಿದ್ದಾರೆ.
ಪ್ರತಿ ದಿನ ಕನಿಷ್ಠ 5 ಲಕ್ಷ ಡೋಸ್ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ವಾರದಲ್ಲಿ ಒಂದು ದಿನ ಲಸಿಕೆ ಉತ್ಸವ ಸಂಘಟಿಸಿ ಅಂದು 15ರಿಂದ 20 ಲಕ್ಷ ಡೋಸ್ ಲಸಿಕೆ ನೀಡುವ ಗುರಿ ಇದೆ’ ಎಂದು ಹೇಳಿದರು.
ರಾಜ್ಯಕ್ಕೆ ವಿದೇಶಗಳಿಂದ ಬರುವವರು ಮೊದಲು ಇಳಿಯುವುದೇ ಬೆಂಗಳೂರಿನಲ್ಲಿ. ಆದ್ದರಿಂದ ಲಸಿಕೆ ನೀಡುವ ವಿಚಾರದಲ್ಲಿ ಬೆಂಗಳೂರಿಗೆ ಪ್ರಾಮುಖ್ಯ ನೀಡುತ್ತಿದ್ದೇವೆ. ಬೆಂಗಳೂರಿನಲ್ಲಿ ಒಟ್ಟು 1.20 ಕೋಟಿ ಜನಸಂಖ್ಯೆ ಇದೆ. ಇದರಲ್ಲಿ ಮಕ್ಕಳನ್ನು ಹೊರತುಪಡಿಸಿದರೆ 80 ಲಕ್ಷ ಜನರು ಲಸಿಕೆ ಪಡೆಯಬಹುದು. ಈಗಾಗಲೇ ಇಲ್ಲಿ 1 ಕೋಟಿ ಡೋಸ್ ಲಸಿಕೆ ನೀಡಿದ್ದೇವೆ. ಬೆಂಗಳೂರಿನ ಕೊಳೆಗೇರಿಗಳಲ್ಲಿ ಲಸಿಕೆಯನ್ನು ಆಂದೋಲನದ ರೀತಿಯಲ್ಲಿ ನೀಡಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


