ಕೊರೋನಾ 2ನೇ ಅಲೆಯಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಸಾವಿರಕ್ಕಿಂತ ಕಡಿಮೆ ಸೋಂಕು ಪತ್ತೆ, 4 ಜಿಲ್ಲೆಗಳಲ್ಲಿ 'ಶೂನ್ಯ' ಪ್ರಕರಣ!
ಕೊರೋನಾ ಎರಡನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬಂದಿದೆ. ಇಂದು 973 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕೊರೋನಾ ಎರಡನೇ ಅಲೆಯಲ್ಲಿ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಸಾವಿರಕ್ಕಿಂತ ಕಡಿಮೆ ಬಂದಿದೆ. ಇಂದು 973 ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,48,228ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 15 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,293ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 264 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,37,550ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು 1,324 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,92,517ಕ್ಕೆ ಏರಿಕೆಯಾಗಿದೆ. ಇನ್ನು 18,392 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,51,219 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 973 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.64ಕ್ಕೆ ಇಳಿದಿದೆ.
ಇನ್ನು ರಾಜ್ಯದ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ರಾಯಚೂರು ಮತ್ತು ವಿಜಯಪುರದಲ್ಲಿ ಶೂನ್ಯ ಪ್ರಕರಣ ಪತ್ತೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


