ರಾಮನಗರ: ಮಾಗಡಿ ತಾಲೂಕು ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಲೋಕಾರ್ಪಣೆ
ಮಾಗಡಿ ತಾಲೂಕ್ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಂಗಳವಾರ ಲೋಕಾರ್ಪಣೆಗೊಳಿಸಿದರು.

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕ್ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಮಂಗಳವಾರ ಲೋಕಾರ್ಪಣೆಗೊಳಿಸಿದರು. ಶಾಸಕ ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಮಾಗಡಿ ತಾಲೂಕ್ ಆಸ್ಪತ್ರೆ ಆವರಣದಲ್ಲಿ ಕೆಆರ್ ಐಡಿಎಲ್ ನ ಸಿಎಸ್ ಆರ್ ಅನುದಾನದಲ್ಲಿ ನಿರ್ಮಿಸಲಾಗಿರುವ ಆಮ್ಲಜನಕ ಉತ್ಪಾದನಾ ಘಟಕ ನಿಮಿಷಕ್ಕೆ 580 ಲೀಟರ್ ಆಮ್ಲಜನಕ ಉತ್ಪಾದಿಸಬಲ್ಲದಾಗಿದೆ. ಇದರಿಂದಾಗಿ ಆಸ್ಪತ್ರೆಯು ಆಮ್ಲಜನಕ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿದಂತಾಗಿದೆ ಎಂದು ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ನಂತರ ತಾಲೂಕಿನ ಕರಲಮಂಗಲಕ್ಕೆ ಭೇಟಿ ನೀಡಿ, ಸಂಜೀವಿನಿ ಒಕ್ಕೂಟದ ಮಹಿಳಾ ಸ್ವ-ಸಹಾಯ ಗುಂಪುಗಳ ಮಹಿಳೆಯರೇ ನಿರ್ವಹಣೆ ಮಾಡುತ್ತಿರುವ 'ಬಾಡಿಗೆ ಆಧಾರಿತ ಕೃಷಿ ಯಂತ್ರೋಪಕರಣ ಕೇಂದ್ರ ವನ್ನು ಸಚಿವರು ವೀಕ್ಷಿಸಿದರು. ಮಹಿಳೆಯರು ಈ ಯಂತ್ರಗಳ ಮೂಲಕ ಮಾಸಿಕ ಅಂದಾಜು 60,000 ರೂಪಾಯಿ ದುಡಿಯುತ್ತಿದ್ದು, ಅವರೊಂದಿಗೆ ಸಂವಾದ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


