ರಾಜ್ಯ

ವೃದ್ಧಾಶ್ರಾಮಗಳಲ್ಲಿನ ವ್ಯವಸ್ಥೆ ಸುಧಾರಿಸಿ, ಇಲ್ಲವೇ ಕ್ರಮ ಎದುರಿಸಿ: ಕೇಂದ್ರ ಸರ್ಕಾರ ಎಚ್ಚರಿಕೆ

ದೇಶದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ವೃದ್ಧಾಶ್ರಮ ಮತ್ತು ಮಾದಕ ವಸ್ತು ವ್ಯಸನ ಮುಕ್ತಿ ಕೇಂದ್ರಗಳ ಹೆಸರಿನಲ್ಲಿ ವಂಚಿಸುತ್ತಿರುವವರಿಗೆ ಕೇಂದ್ರ ಸರ್ಕಾರ ಸೋಮವಾರ ಎಚ್ಚರಿಕೆ ನೀಡಿದೆ.

ವೃದ್ಧಾಶ್ರಾಮಗಳಲ್ಲಿನ ವ್ಯವಸ್ಥೆ ಸುಧಾರಿಸಿ, ಇಲ್ಲವೇ ಕ್ರಮ ಎದುರಿಸಿ: ಕೇಂದ್ರ ಸರ್ಕಾರ ಎಚ್ಚರಿಕೆ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ದೇಶದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ವೃದ್ಧಾಶ್ರಮ ಮತ್ತು ಮಾದಕ ವಸ್ತು ವ್ಯಸನ ಮುಕ್ತಿ ಕೇಂದ್ರಗಳ ಹೆಸರಿನಲ್ಲಿ ವಂಚಿಸುತ್ತಿರುವವರಿಗೆ ಕೇಂದ್ರ ಸರ್ಕಾರ ಸೋಮವಾರ ಎಚ್ಚರಿಕೆ ನೀಡಿದೆ. 

ಸುದ್ದಿಗಾರರೊಂಡಿದೆ ಮಾತನಾಡಿರುವ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ ಅವರು,  ದೇಶದಲ್ಲಿ ಸ್ವಯಂ ಸೇವಾ ಸಂಸ್ಥೆಗಳು ವೃದ್ಧಾಶ್ರಮ ಮತ್ತು ಮಾದಕ ವಸ್ತು ವ್ಯಸನ ಮುಕ್ತಿ ಕೇಂದ್ರಗಳ ಹೆಸರಿನಲ್ಲಿ ಕೇಂದ್ರ ಸರ್ಕಾರದಿಂದ ಹಣವನ್ನು ಪಡೆಯುತ್ತಿದೆ. ಆದರೆ, ಸೂಕ್ತ ರೀತಿಯ ವ್ಯವಸ್ಥೆಗಳನ್ನು ನೀಡುತ್ತಿಲ್ಲ. 15-20 ಜನರನ್ನು ಹೊಂದಿರುವ ಕೇಂದ್ರಗಳಿಗೆ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರ ರೂ.24 ಲಕ್ಷ ನೀಡುತ್ತಿದೆ. ಆದರೆ, ಸಾಕಷ್ಟು ಜನರು ಕೇಂದ್ರ ಸರ್ಕಾರದಿಂದ ಹಣ ಪಡೆಯುತ್ತಿರುವ ಕುರಿತು ಮಾಹಿತಿ ಬಹಿರಂಗಪಡಿಸುತ್ತಿಲ್ಲ ಎಂದು ಹೇಳಿದ್ದಾರೆ. 

ಕೆಲ ಸಂಸ್ಥೆಗಳು ಕೇಂದ್ರ ಸರ್ಕಾರದಿಂದ ಪಡೆಯುತ್ತಿರುವ ಹಣವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಕೆಲವರು ವೃದ್ಧಾಶ್ರಮ ಹಾಗೂ ಮಾದಕ ವಸ್ತು ವ್ಯಸನ ಮುಕ್ತಿ ಕೇಂದ್ರಗಳನ್ನು ನಡೆಸದಿದ್ದರೂ ಕೂಡ ಕೇಂದ್ರದಿಂದ ಹಣ ಪಡೆದುಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರದ ಹಣ ದುರ್ಬಳಕೆಯಾಗದಂತೆ ಮಾಡಲು ನಾವು ಕ್ರಮ ಕೈಗೊಳ್ಳುತ್ತಿದ್ದೇವೆ. 

ವೃದ್ಧಾಶ್ರಮದಂತಹ ಆಶ್ರಮಗಳ ಹೆಸರಿನಲ್ಲಿ ಸುಳ್ಳು ದಾಖಲೆ ನೀಡಿ ಹಣ ಪಡೆಯುವ ಎನ್‌ಜಿಓಗಳನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಕಳೆದ ತಿಂಗಳು ಒಂದು ಪೋರ್ಟಲ್‌ ಆರಂಭಿಸಿದೆ. ಇನ್ನು ಮುಂದೆ ನೋಂದಣಿಯಾಗುವ ಸಂಸ್ಥೆಗಳು ಕಡ್ಡಾಯವಾಗಿ ಪೋರ್ಟಲ್‌ ಮುಖಾಂತರ ಅರ್ಜಿ ಸಲ್ಲಿಸಿ, ದಾಖಲೆಗಳನ್ನು ನೀಡಬೇಕು. ಇದರಿಂದ ಸರ್ಕಾರಕ್ಕೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ. 

ಈ ಪೋರ್ಟಲ್ ನಲ್ಲಿ ಆಶ್ರಮಕ್ಕೆ ಆಗಮಿಸುವವರು, ಬರುವವರ ಮುಖ ಚಹರೆ ದಾಖಲಾಗುತ್ತದೆ. ಅದರ ಆಧಾರದ ಮೇಲೆ ಹಣಕಾಸಿನ ನೆರವು ನೀಡಲಾಗುತ್ತದೆ. ದೇಶದಲ್ಲಿ ಮಾದಕ ವ್ಯಸನಗಳ ಸಮಸ್ಯೆ ಗಂಭೀರವಾಗಿದೆ. ಹೊರರಾಷ್ಟ್ರಗಳಿಂದ ಕಳ್ಳ ಸಾಗಾಣಿಕೆ ಮೂಲಕ ರವಾನೆಯಾಗುವ ಮಾದಕ ವಸ್ತುಗಳ ಪ್ರಮಾಣ ಹೆಚ್ಚಿದೆ. ತಂದೆ ತಾಯಿಯಿಲ್ಲದ, ಮನೆಯಲ್ಲಿ ಕಲಹ, ವಿಚ್ಛೇದನ ಪ್ರಕರಣಗಳು ಈ ವ್ಯಸನ ಹೆಚ್ಚಲು ಕಾರಣವಾಗಿದೆ. ಶೇ.450ರಿಂದ 60ರಷ್ಟು ಈಗಲೂ ಬೆಂಗಳೂರಿನಲ್ಲಿ ಸಿಗುತ್ತಿದೆ ಎಂಬ ಮಾಹಿತಿ ಇದೆ.ಅದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.