ಕೊರೋನಾ ಸಂಖ್ಯೆಯಲ್ಲಿ ಗಣನೀಯ ಏರಿಕೆ: ಬೆಂಗಳೂರಿನಲ್ಲಿ 256, ರಾಜ್ಯದಲ್ಲಿ 456 ಪ್ರಕರಣ ಪತ್ತೆ: 6 ಸಾವು
ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 456 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 456 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಪತ್ತೆಯಾಗಿರುವ ಹೊಸ ಸೋಂಕು ಪ್ರಕರಣಗಳ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ. ಅಂತೆಯೇ ಇಂದು ಕೋರೋನಾದಿಂದಾಗಿ 4 ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,230 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 330 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 29,52,708ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 7,132ಕ್ಕೆ ಕುಸಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 256 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಮೂರು ಸಾವು ವರದಿಯಾಗಿದೆ. ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 12,57,498ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 16,345ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


