ಅಧಿವೇಶನಕ್ಕೂ ಮುನ್ನ ಬೆಳಗಾವಿಯಲ್ಲಿ ರೈತರ ಸಮಾವೇಶ
ಗಡಿ ಜಿಲ್ಲೆಯಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುನ್ನ ಅಂದರೆ ಡಿಸೆಂಬರ್ 12 ರಂದು ಬೆಳಗಾವಿಯಲ್ಲಿ ರಾಜ್ಯದ ವಿವಿಧೆಡೆಯಿಂದ ರೈತರ ಸಮಾವೇಶ ನಡೆಯಲಿದೆ.

ಬೆಂಗಳೂರು: ಗಡಿ ಜಿಲ್ಲೆಯಲ್ಲಿ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ದಿನ ಮುನ್ನ ಅಂದರೆ ಡಿಸೆಂಬರ್ 12 ರಂದು ಬೆಳಗಾವಿಯಲ್ಲಿ ರಾಜ್ಯದ ವಿವಿಧೆಡೆಯಿಂದ ರೈತರ ಸಮಾವೇಶ ನಡೆಯಲಿದೆ.
ಎಪಿಎಂಸಿ ತಿದ್ದುಪಡಿಗಳನ್ನು ಮತ್ತು ಭೂಸುಧಾರಣಾ ಕಾಯಿದೆ ಹಿಂಪಡೆಯುವಂತೆ ಮಾಡಲು, ಕೇಂದ್ರದಿಂದ ಭತ್ತ ಖರೀದಿ ಹೆಚ್ಚಿಸುವುದು ಹಾಗೂ ಕಳೆದ ಕೆಲವು ವಾರಗಳಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಈ ಸಮಾವೇಶ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಇದಷ್ಟೇ ಅಲ್ಲದೆ, ಅಧಿವೇಶನದಲ್ಲಿ ಚುನಾಯಿತ ಪ್ರತಿನಿಧಿಗಳು ರೈತರ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವಂತೆಯೂ ಒತ್ತಡ ಹೇರಲು ರೈತರು ನಿರ್ಧರಿಸಿದ್ದಾರೆ.
ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಮತ್ತು ಸಂಯುಕ್ತ ಕಿಸಾನ್ ಮೋರ್ಚಾದ ರಾಜ್ಯ ಕೋರ್ ಕಮಿಟಿ ಸದಸ್ಯ ಟಿ ಯಶ್ವಂತ್ ಮಾತನಾಡಿ, ಇತ್ತೀಚಿನ ಮಳೆಯಿಂದಾಗಿ ರಾಜ್ಯದಾದ್ಯಂತ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆ ಹಾನಿ, ಹಾಲು ಒಕ್ಕೂಟಗಳು ಖರೀದಿ ದರ ಕಡಿತಗೊಳಿಸಲಾಗಿದೆ. ಸರ್ಕಾರ ರಾಜ್ಯಾದ್ಯಂತ ಭತ್ತ ಖರೀದಿ ಕೇಂದ್ರಗಳನ್ನು ತೆರೆಯದಿಲ್ಲ. ಇವೆಲ್ಲವೂ ರೈತರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಹೀಗಾಗಿ ಸರ್ಕಾರ ಈ ಎಲ್ಲ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಎಪಿಎಂಸಿ ಕಾಯ್ದೆ ಮತ್ತು ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


