ಆರ್ ಎಸ್ಎಸ್, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ ನಿಧನ
ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ (92) ಡಿ.06 ರಂದು ಸಂಜೆ ನಿಧನರಾದರು.

ಮಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಬಿಜೆಪಿಯ ಹಿರಿಯ ನಾಯಕ, ಮಾಜಿ ಶಾಸಕ ಉರಿಮಜಲು ರಾಮ್ ಭಟ್ (92) ಡಿ.06 ರಂದು ಸಂಜೆ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ರಾಮ್ ಭಟ್ ಅವರು ಒಂದು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮರಳಿ ಮನೆಗೆ ವಾಪಸ್ಸಾಗಿದ್ದರು. ಆದರೆ ಇಂದು ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರದಿಂದ 7 ಬಾರಿ ಸ್ಪರ್ಧಿಸಿದ್ದ ರಾಮ್ ಭಟ್ ಅವರು 2 ಬಾರಿ ಶಾಸಕರಾಗಿದ್ದರು.
ಜನಸಂಘದಿಂದ 1957 ರಲ್ಲಿ ಮೊದಲ ಬಾರಿಗೆ ಚುನಾವಣೆಗೆ ರಾಮ್ ಭಟ್ ಸ್ಪರ್ಧಿಸಿದ್ದರು. ಬಿಜೆಪಿ ವಿರುದ್ಧವೂ ಬಂಡಾಯವೆದ್ದಿದ್ದ ರಾಮ್ ಭಟ್ 2009 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ನಳಿನ್ ಕುಮಾರ್ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ಈ ಬಳಿಕ ಮೋದಿ ಪ್ರಧಾನಿಯಾದ ನಂತರ ರಾಮ್ ಭಟ್ ಅವರು ಬಿಜೆಪಿಗೆ ಮರಳಿ ಬೆಂಬಲ ಘೋಷಿಸಿದ್ದರು. 2019 ರಲ್ಲಿ ಮೋದಿ ಸ್ವತಃ ಕರೆ ಮಾಡಿ ರಾಮ್ ಭಟ್ ಅವರೊಂದಿಗೆ ಮಾತನಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


