ಚಿಕ್ಕಮಗಳೂರು: ನವೋದಯ ಶಾಲೆಯಲ್ಲಿ 35 ಮಂದಿಗೆ ಕೋವಿಡ್ ಪಾಸಿಟಿವ್
ಚಿಕ್ಕಮಗಳೂರು ಜಿಲ್ಲೆಯ ಸೀಗೊಡುವಿನ ಜವಹರ್ ನವೋದಯ ಶಾಲೆಯಲ್ಲಿ ಶನಿವಾರ 35 ಮಂದಿಗೆ ಕೋವಿಡ್-19 ಸೋಂಕು ಕಾಣಿಸಿಕೊಳ್ಳುವುದರೊಂದಿಗೆ ಸೋಂಕಿತರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗ: ಚಿಕ್ಕಮಗಳೂರು ಜಿಲ್ಲೆಯ ಸೀಗೊಡುವಿನ ಜವಹರ್ ನವೋದಯ ಶಾಲೆಯಲ್ಲಿ ಶನಿವಾರ 35 ಮಂದಿಗೆ ಕೋವಿಡ್-19 ಸೋಂಕು ಕಾಣಿಸಿಕೊಳ್ಳುವುದರೊಂದಿಗೆ ಸೋಂಕಿತರ ಸಂಖ್ಯೆ 103ಕ್ಕೆ ಏರಿಕೆಯಾಗಿದೆ. ಪಾಸಿಟಿವ್ ವರದಿಯಾಗಿರುವ ಸೋಂಕಿತರನ್ನು ಪ್ರತ್ಯೇಕ ಬ್ಲಾಕ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.
418 ಸ್ಯಾಂಪಲ್ ಗಳನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಶುಕ್ರವಾರ ಮೂವರು ವಿದ್ಯಾರ್ಥಿಗಳು ಹಾಗೂ ನಾಲ್ವರು ಸಿಬ್ಬಂದಿಗೆ ಪಾಸಿಟಿವ್ ಬಂದಿತ್ತು. ತದನಂತರ ಶನಿವಾರ 61 ಪಾಸಿಟಿವ್ ಪ್ರಕರಣ ವರದಿಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್. ಎನ್. ಉಮೇಶ್ ತಿಳಿಸಿದ್ದಾರೆ.
ಭಾನುವಾರ ಕೂಡಾ 35 ಪ್ರಕರಣಗಳು ವರದಿಯಾಗಿವೆ. ಆದ್ದರಿಂದ ಇಲ್ಲಿಯವರೆಗೂ 92 ವಿದ್ಯಾರ್ಥಿಗಳು, 11 ಸಿಬ್ಬಂದಿ ಸೇರಿದಂತೆ 103 ಮಂದಿಗೆ ಸೋಂಕು ತಗುಲಿದ್ದು, ಎಲ್ಲರೂ ರೋಗ ಲಕ್ಷಣರಹಿತರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಶಾಲೆಯನ್ನು ಮುಚ್ಚಲಾಗಿದ್ದು, ತರಗತಿ ನಡೆಯುತ್ತಿಲ್ಲ. ಶಾಲೆಯನ್ನು ಕಂಟೈನ್ ಮೆಂಟ್ ವಲಯ ಎಂದು ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


