ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದನ್ನು ತಡೆಗಟ್ಟಲು ಮಡಿಕೇರಿಯಲ್ಲಿ ಸಿಸಿ ಟಿವಿ ಅಳವಡಿಕೆ
ಸಾರ್ವಜನಿಕರು ಆ ಪ್ರದೇಶಗಳಲ್ಲಿ ಕಸ ಎಸೆಯುವುದು ಕಂಡುಬಂದರೆ ಅವರ ಹೆಸರನ್ನು ಜಗಜ್ಜಾಹೀರುಗೊಳಿಸಿ ಅವರಿಗೆ ಅವಮಾನಕ್ಕೀಡು ಮಾಡಲಾಗುವುದು. ಈ ಶಿಕ್ಷೆಯ ಭಯದಿಂದಲಾದರೂ ಜನರು ಕಸ ಎಸೆಯದೇ ಇರಲಿ ಎನ್ನುವ ಆಶಯ ಅಧಿಕಾರಿಗಳದು.

ಮಡಿಕೇರಿ: ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದಾಗಿ ಉದ್ಭವವಾಗಿರುವ ಸಮಸ್ಯೆಯನ್ನು ಬಗೆಹರಿಸಲು ಮಡಿಕೇರಿ ಸಿಟಿ ಮುನಿಸಿಪಲ್ ಕಾರ್ಪೊರೇಷನ್ ತಂತ್ರಜ್ಞಾನದ ಮೊರೆ ಹೋಗಿದೆ. ಕಸ ಎಸೆಯಬಾರದ ಜಾಗಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವ ಕಾರ್ಯಕ್ಕೆ ಅದು ಮುಂದಾಗಿದೆ.
ಒಟ್ಟು 28 ಕಡೆ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದ್ದು, ಸಾರ್ವಜನಿಕರು ಆ ಪ್ರದೇಶಗಳಲ್ಲಿ ಕಸ ಎಸೆಯುವುದು ಕಂಡುಬಂದರೆ ಅವರ ಹೆಸರನ್ನು ಜಗಜ್ಜಾಹೀರುಗೊಳಿಸಿ ಅವರಿಗೆ ಅವಮಾನಕ್ಕೀಡು ಮಾಡಲಾಗುವುದು. ಈ ಶಿಕ್ಷೆಯ ಭಯದಿಂದಲಾದರೂ ಜನರು ಕಸ ಎಸೆಯದೇ ಇರಲಿ ಎನ್ನುವ ಆಶಯ ಅಧಿಕಾರಿಗಳದು.
ಈ ಹಿಂದೆ ಸಿಸಿ ಕ್ಯಾಮೆರಾಗಳನ್ನು ಅಧಿಕಾರಿಗಳೇ ತಂದು ಅಳವಡಿಸುವುದು ಎಂದಿತ್ತು, ಆದರೆ ಅದರೆ ವೆಚ್ಚ ಹೆಚ್ಚಿದ್ದರಿಂದ ಇದೀಗ ಸಿಸಿ ಕ್ಯಾಮೆರಾ ಅಳವಡಿಕೆ ಮತ್ತು ನಿರ್ವಹಣೆಯ ಹೊಣೆಯನ್ನು ಖಾಸಗಿ ಸಂಸ್ಥೆಗೆ ವಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


