ರಾಜ್ಯ

ಕರ್ನಾಟಕದ ಕಾರ್ಮಿಕರಿಗೆ ನರೇಗಾ ವೇತನ ವಿಳಂಬ

ಕೇಂದ್ರ ಸರ್ಕಾರ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾರ್ಮಿಕ ಘಟಕ ಅನುದಾನವನ್ನು ಇನ್ನಷ್ಟೇ ಬಿಡುಗಡೆ ಮಾಡಬೇಕಿದ್ದು, ಲಕ್ಷಾಂತರ ಮಂದಿ ಕಾರ್ಮಿಕರು ವೇತನದ ನಿರೀಕ್ಷೆಯಲ್ಲಿದ್ದಾರೆ ಎಂದು ಆರ್ ಡಿಪಿ ಆರ್ ಇಲಾಖೆ ತಿಳಿಸಿದೆ.

ಕರ್ನಾಟಕದ ಕಾರ್ಮಿಕರಿಗೆ ನರೇಗಾ ವೇತನ ವಿಳಂಬ
ಕಾರ್ಮಿಕರು (ಸಾಂಕೇತಿಕ ಚಿತ್ರ)
Published On :

ಕೊಪ್ಪಳ: ಕೇಂದ್ರ ಸರ್ಕಾರ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಜಿಎನ್ ಆರ್ ಇಜಿಎಸ್) ಕಾರ್ಮಿಕ ಕಾರ್ಮಿಕ ಘಟಕ ಅನುದಾನವನ್ನು ಇನ್ನಷ್ಟೇ ಬಿಡುಗಡೆ ಮಾಡಬೇಕಿದ್ದು, ಲಕ್ಷಾಂತರ ಮಂದಿ ಕಾರ್ಮಿಕರು ವೇತನದ ನಿರೀಕ್ಷೆಯಲ್ಲಿದ್ದಾರೆ ಎಂದು ಆರ್ ಡಿಪಿ ಆರ್ ಇಲಾಖೆ ತಿಳಿಸಿದೆ.
 
ಯುಪಿಎ ಅವಧಿಯಿಂದಲೂ ಎಂಜಿಎನ್ ಆರ್ ಇಜಿಎಸ್ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಕೋವಿಡ್-19 ನ ಎರಡೂ ಅಲೆಗಳ ಅವಧಿಯಲ್ಲಿ ತಮ್ಮ ಊರುಗಳಿಗೆ ಮರಳಿದ್ದ ವಲಸಿಗ ಕಾರ್ಮಿಕರಿಗೆ ಸಹಕಾರಿಯಾಗಿದ್ದದ್ದು ಇದೇ ಯೋಜನೆಯಾಗಿದೆ. 

ಕಾರ್ಮಿಕರು ತಮ್ಮ ಜೀವನ ನಡೆಸಲು ಇದೇ ಯೋಜನೆಯನ್ನು ನೆಚ್ಚಿಕೊಂಡಿದ್ದು, ನೈಸರ್ಗಿಕ ವಿಪತ್ತುಗಳ ಸಂದರ್ಭದಲ್ಲಿ ಕಾರ್ಮಿಕರ ಕೈ ಹಿಡಿಯುವ ಯೋಜನೆಯಾಗಿದೆ. ಕಾರ್ಮಿಕರಿಗೆ ಈ ಯೋಜನೆಯಡಿ ನೀಡುವ ವೇತನ ವಿಳಂಬವಾದಲ್ಲಿ ಯುಎಲ್ ಬಿ ಚುನಾವಣೆಯಲ್ಲಿ ಬಿಜೆಪಿ ಮೇಲೆ ಅದು ಪರಿಣಾಮ ಬೀರಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. 

ಕೊಪ್ಪಳ ಜಿಲ್ಲಾ ಪಂಚಾಯತ್ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸ್ಮಶಾನದಲ್ಲಿ ಉದ್ಯಾನ, ವಿಕಲಚೇತನರಿಗಾಗಿ ಉದ್ಯಾನ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳಲ್ಲಿ ತಲಾ ಒಂದು ಮಾದರಿಯ ಉದ್ಯಾನವನ ಸೇರಿದಂತೆ ಹಲವು ಹೊಸ ಮಾದರಿಗಳನ್ನು ಅನುಸರಿಸುತ್ತಿದೆ.

ಕೊಪ್ಪಳ ಜಿಲ್ಲಾ ಪಂಚಾಯಿತಿ ಒಂದೇ ಕಾರ್ಮಿಕರಿಗೆ 10 ಕೋಟಿ ರೂಪಾಯಿ ಮೊತ್ತವನ್ನು ಬಾಕಿ ಉಳಿಸಿಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.