ಬೆಂಗಳೂರು: ಸಂಚಾರಿ ಪೊಲೀಸ್ ಜಂಟಿ ಆಯುಕ್ತ ಬಿ.ಆರ್ ರವಿಕಾಂತೇಗೌಡ ಮನೆಯಲ್ಲಿ ಕಳ್ಳತನ
ಟ್ರಾಫಿಕ್ ಪೊಲೀಸ್ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳು ಕಳವು ಆಗಿವೆ.

ಬೆಂಗಳೂರು: ಟ್ರಾಫಿಕ್ ಪೊಲೀಸ್ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಮನೆಯಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಸಂಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳು ಕಳವು ಆಗಿವೆ.
ಬಿ.ಆರ್. ರವಿಕಾಂತೇಗೌಡ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಈ ಬಗ್ಗೆ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬಳ್ಳಾರಿಯ ಮಹಿಳೆಯೊಬ್ಬರು ರವಿಕಾಂತೇಗೌಡ ಮನೆಯಲ್ಲಿ ಕೆಲ ವರ್ಷಗಳಿಂದ ಕೆಲಸಕ್ಕಿದ್ದರು. ಯಾರಿಗೂ ಹೇಳದೇ ಅವರು ಸೋಮವಾರ ಮನೆಯಿಂದ ಹೊರಗೆ ಹೋಗಿ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಸಲ್ಲಿಕೆಯಾದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
‘ಮಹಿಳೆಯ ಕಾಯಂ ವಿಳಾಸ ಹಾಗೂ ಅವರ ಸಂಬಂಧಿಕರ ಮಾಹಿತಿ ಕಲೆ ಹಾಕಲಾಗಿದೆ. ಮಹಿಳೆ ಇರುವ ಜಾಗವನ್ನು ಪತ್ತೆ ಮಾಡಲಾಗಿದ್ದು, ಅವರನ್ನು ನಗರಕ್ಕೆ ಕರೆತಂದು ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


