20 ಅಂಕಗಳಿಗೆ ಎಸ್ ಎಸ್ ಎಲ್ ಸಿ ಯಲ್ಲಿ ಆಂತರಿಕ ಪರೀಕ್ಷೆ: ಪ್ರೌಢ ಶಿಕ್ಷಣ ಮಂಡಳಿ ಮಾರ್ಗಸೂಚಿ
ಎಸ್ ಎಸ್ ಎಲ್ ಸಿಯ ಎಲ್ಲಾ ಸಬ್ಜೆಕ್ಟ್ ಗಳಲ್ಲಿ 20 ಅಂಕಗಳಿಗೆ ಮತ್ತು ಪ್ರಥಮ ಭಾಷೆಗೆ 125 ಅಂಕವಿದ್ದು ಅದರಲ್ಲಿ 25 ಅಂಕಗಳಿಗೆ ಪರೀಕ್ಷೆ ಇರುತ್ತದೆ.

ಬೆಂಗಳೂರು: ಮಾರ್ಚ್-ಏಪ್ರಿಲ್ 2022 ರಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಆಂತರಿಕ ಪರೀಕ್ಷೆ ನಡೆಸಲು ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ತೀರ್ಮಾನಿಸಿದೆ.
ಎಸ್ ಎಸ್ ಎಲ್ ಸಿಯ ಎಲ್ಲಾ ಸಬ್ಜೆಕ್ಟ್ ಗಳಲ್ಲಿ 20 ಅಂಕಗಳಿಗೆ ಮತ್ತು ಪ್ರಥಮ ಭಾಷೆಗೆ 125 ಅಂಕವಿದ್ದು ಅದರಲ್ಲಿ 25 ಅಂಕಗಳಿಗೆ ಆಂತರಿಕ ಪರೀಕ್ಷೆ ಇರುತ್ತದೆ. ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿರುವುದೇ ಇದಕ್ಕೆ ಕಾರಣ. ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಮಂಗಳವಾರ ಎಸ್‌ಎಸ್‌ಎಲ್‌ಸಿ ಮುಖ್ಯ ಮತ್ತು ಪೂರ್ವಸಿದ್ಧತೆಗಾಗಿ ಸಮಗ್ರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಬಾಹ್ಯ ಪರೀಕ್ಷೆಯಲ್ಲಿ, ವಿದ್ಯಾರ್ಥಿಗಳು ಕನಿಷ್ಠ 35 ಅಂಕಗಳನ್ನು ಗಳಿಸಬೇಕು. ಇತರ ವಿಷಯಗಳಲ್ಲಿ 80 ಅಂಕಗಳಿಗೆ ಕನಿಷ್ಠ 28 ಅಂಕಗಳನ್ನು ಪಡೆಯಬೇಕು.
ಒಟ್ಟಾರೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಒಬ್ಬ ವಿದ್ಯಾರ್ಥಿಯು 500 ಅಂಕಗಳಲ್ಲಿ 175 (ಶೇ. 35) ಗಳಿಸಬೇಕು ಮತ್ತು ಪ್ರತಿ ವಿಷಯದಲ್ಲಿ ಕನಿಷ್ಠ 30 ಪ್ರತಿಶತ ಅಂಕಗಳನ್ನು ಪಡೆದಿರಬೇಕು. ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಲು ಆಂತರಿಕ ಪರೀಕ್ಷೆಯಲ್ಲಿ ಕನಿಷ್ಠ ಅಂಕಗಳನ್ನು ಗಳಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


