ಬೆಳಗಾವಿಯೊಂದಿಗೆ ಬಿಪಿನ್ ರಾವತ್ ಅವರಿಗಿತ್ತು ಅವಿನಾಭಾವ ಸಂಬಂಧ!
ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಗಡಿ ಜಿಲ್ಲೆ ಬೆಳಗಾವಿ ಜೊತೆ ಅವಿನಾಭಾವ ಸಂಬಂಧವಿತ್ತು.

ಬೆಳಗಾವಿ: ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರಿಗೆ ಗಡಿ ಜಿಲ್ಲೆ ಬೆಳಗಾವಿ ಜೊತೆ ಅವಿನಾಭಾವ ಸಂಬಂಧವಿತ್ತು.
ರಾವತ್ ಬೆಳಗಾವಿಯ ಮರಾಠಾ ಲಘು ಪದಾತಿ ದಳದ ಬಗ್ಗೆ ಹೆಚ್ಚಿನ ಅಭಿಮಾನ ಹೊಂದಿದ್ದರು. 2017ರ ನವಂಬರ್ 3ರಂದು ಎಂಎಲ್ಐಆರ್ಸಿ ಪಾಸಿಂಗ್ ಔಟ್ ಪರೇಡ್ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಹೊಸದಾಗಿ ಆಯ್ಕೆಯಾದ ಸೈನಿಕರನ್ನು ಉದ್ದೇಶಿಸಿ ಬಿಪಿನ್ ರಾವತ್ ಮಾತನಾಡಿದ್ದರು.
ಎರಡನೇ ಬಾರಿಗೆ ಬೆಳಗಾವಿಗೆ ಆಗಮಿಸಿದ್ದ ಬಿಪಿನ್ ರಾವತ್, 2018ರಲ್ಲಿ ಅಕ್ಟೋಬರ್ 30ರಂದು ಶರ್ಕತ್ ಕದನದ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಿದ್ದರು. ಅಂದು ಬಿಪಿನ್ ರಾವತ್ ಭಾರತೀಯ ಭೂಸೇನೆ ಮುಖ್ಯಸ್ಥರಾಗಿದ್ದರು.
1918ರಲ್ಲಿ ಅಕ್ಟೋಬರ್ 23ರಿಂದ 30ರ ವರೆಗೆ ಮಿಸಿಪಿಟೋನಿ ದೇಶದ ಶರ್ಕತ್ ಪ್ರದೇಶದಲ್ಲಿ ಒಟ್ಟೊಮನ್ ಸೈನಿಕರ ವಿರುದ್ಧ ಹೋರಾಡಿ ಮರಾಠಾ ರೆಜಿಮೆಂಟ್ ಸೈನಿಕರು ಜಯಗಳಿಸಿದ್ದರು. ಮರಾಠಾ ಲಘು ಪದಾತಿ ದಳದ ಸೈನಿಕರ ಬಗ್ಗೆ ಬಿಪಿನ್ ರಾವತ್ ಅಪಾರ ಅಭಿಮಾನ ಹೊಂದಿದ್ದರು.
ಮೂರು ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ದುರ್ಮರಣ ಹೊಂದಿರುವುದು ಇಡೀ ದೇಶವೇ ದಿಗ್ಭ್ರಾಂತಿಯಾಗಿದೆ. ರಾವತ್ ಗ್ರೇಟ್ ಲೀಡರ್. ಸೈನ್ಯವನ್ನು ಮುಂಚೂಣಿಯಲ್ಲಿ ನಿಂತು ಮುನ್ನಡೆಸಿದ್ದರು. ಭಾರತದ ಸುರಕ್ಷಗೆ ಬಗ್ಗೆ ಅವರದೇ ದಿಟ್ಟ ನಿಲುವು ತೆಗೆದುಕೊಂಡಿದ್ದರು.
ಬಿಪಿನ್ ರಾವತ್ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿ ವಕೀಲರ ಸಂಘ ಸಂತಾಪ ಸೂಚಕ ಸಭೆಯನ್ನು ಆಯೋಜಿಸಿತ್ತು. ಬೆಳಗಾವಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಚಂದ್ರಶೇಖರ ಜೋಶಿ ಹೆಲಿಕಾಪ್ಟರ್ ಅಪಘಾತದಲ್ಲಿ ಮಡಿದ ಜನರಲ್ ಬಿಪಿನ್ ರಾವತ್, ಎಲ್ಲಾ ಅಧಿಕಾರಿಗಳು ಮತ್ತು ಇತರರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


