ಕೋವಿಡ್-19: ರಾಜ್ಯದಲ್ಲಿ ಇಂದು 314 ಹೊಸ ಸೋಂಕು ಪ್ರಕರಣ, 2 ಸಾವು ವರದಿ
ರಾಜ್ಯದಲ್ಲಿ ಕೊರೋನಾ ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 314 ಹೊಸ ಸೋಂಕು ಪ್ರಕರಣಗಳು ಹಾಗೂ 2 ಸಾವು ವರದಿಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 314 ಹೊಸ ಸೋಂಕು ಪ್ರಕರಣಗಳು ಹಾಗೂ 2 ಸಾವು ವರದಿಯಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, 'ರಾಜ್ಯದಲ್ಲಿ ಇಂದು ಒಟ್ಟು 314 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ. 2 ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದ್ದು, ಉಳಿದ 29 ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಬಾಗಲಕೋಟೆ, ಬೀದರ್ ಸೇರಿ ಒಟ್ಟು 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ರಾಜ್ಯದಲ್ಲಿ 339 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,305 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,99,785ಕ್ಕೆ ಏರಿಕೆಯಾಗಿದೆ. ಅಂತೆಯೇ ಗುಣಮುಖರ ಸಂಖ್ಯೆ 29,54,196ಕ್ಕೆ ಏರಿಕೆಯಾಗಿದೆ. ಕೋವಿಡ್-19 ಮರಣ ಪ್ರಮಾಣ ಶೇ.0.63 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.26 ರಷ್ಟಿದೆ.
ಇಂದು ಬೆಂಗಳೂರು ನಗರದಲ್ಲಿ 179 ಮಂದಿಗೆ ಕೊರೊನಾ ಬಂದಿದ್ದು, 204 ಮಂದಿ ಗುಣಮುಖರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


