Kodavas ಬದಲು ‘‘Codavas’’ ಬಳಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಎಲ್ಲಾ ಸರ್ಕಾರಿ ಅಧಿಸೂಚನೆಗಳಲ್ಲಿ ಕೊಡವ ಸಮುದಾಯವನ್ನು ಉಲ್ಲೇಖಿಸುವಾಗ ಕೊಡಗರು ಎಂದು ಬಳಸುವಾಗ ‘Kodavas’ ಅನ್ನು ‘‘Codavas’ ಎಂದು ಬಳಸುವುದನ್ನು ಸರಿಪಡಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ...

ಹುಬ್ಬಳ್ಳಿ: ಎಲ್ಲಾ ಸರ್ಕಾರಿ ಅಧಿಸೂಚನೆಗಳಲ್ಲಿ ಕೊಡವ ಸಮುದಾಯವನ್ನು ಉಲ್ಲೇಖಿಸುವಾಗ ಕೊಡಗರು ಎಂದು ಬಳಸುವಾಗ ‘Kodavas’ ಅನ್ನು ‘‘Codavas’ ಎಂದು ಬಳಸುವುದನ್ನು ಸರಿಪಡಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
Codavas ಪದ ಬಳಕೆ ಸರಿಪಡಿಸುವಂತೆ ಕೋರಿ ಕೊಡವ ನ್ಯಾಷನಲ್ ಕೌನ್ಸಿಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ.
2009 ರಲ್ಲಿ, ಕೊಡವ ನ್ಯಾಷನಲ್ ಕೌನ್ಸಿಲ್ ಸರ್ಕಾರದ ಅಧಿಸೂಚನೆಗಳಲ್ಲಿ 'Kodagaru' ಎಂಬ ಪದವನ್ನು ‘Codavas’ ಎಂದು ಸರಿಪಡಿಸುವಂತೆ ಕರ್ನಾಟಕ ಖಾಯಂ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಮಾಡಿತ್ತು. ಆಯೋಗವು ರಾಜ್ಯಕ್ಕೆ ಮನವಿಯನ್ನು ರವಾನಿಸಿದ್ದರೂ ಅದು ಸರ್ಕಾರದ ಗಮನಕ್ಕೆ ಬಂದಿರಲಿಲ್ಲ.
ನಂತರ, ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್‌ಯು ನಾಚಪ್ಪ ಅವರು ಪದ ಬಳಕೆಯನ್ನು ಸರಿಪಡಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸುಮಾರು ಒಂದು ದಶಕದ ನಂತರ, ಕೊಡವ ನ್ಯಾಷನಲ್ ಕೌನ್ಸಿಲ್ ಪರವಾಗಿ ನ್ಯಾಯಾಲಯ ಆದೇಶ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


