ಕೋವಿಡ್-19: ರಾಜ್ಯದಲ್ಲಿಂದು 320 ಹೊಸ ಪ್ರಕರಣ ಪತ್ತೆ, 317 ಗುಣಮುಖ, ಇಬ್ಬರು ಸೋಂಕಿತರು ಸಾವು
ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 320 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3000105ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಹೊಸದಾಗಿ 320 ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3000105ಕ್ಕೆ ಏರಿಕೆಯಾಗಿದೆ.
317 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29,54,513ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 7,306 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇಬ್ಬರು ಸೋಂಕಿತರು ಇಂದು ಮೃತಪಟ್ಟಿದ್ದು, ಸೋಂಕಿನಿಂದ ಈವರೆಗೂ ಮೃತಪಟ್ಟವರ ಒಟ್ಟು ಸಂಖ್ಯೆ 38,257ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.30 ರಷ್ಟಿದ್ದು, ಮರಣ ಪ್ರಮಾಣ ಶೇ. 0.62 ರಷ್ಟಿದೆ. ಬೆಂಗಳೂರಿನಲ್ಲಿ 190 ಹೊಸ ಪ್ರಕರಣ ಪತ್ತೆಯಾಗಿದ್ದು, 123 ಸೋಂಕಿತರು ಗುಣಮುಖರಾಗಿದ್ದಾರೆ. ಇಬ್ಬರು ಸಾವನ್ನಪ್ಪಿದ್ದಾರೆ.
ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ್, ಹಾವೇರಿ, ಕೋಲಾರ, ಕೊಪ್ಪಳ,ರಾಯಚೂರು, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


