ಭಾರತವನ್ನು ಪಾಕಿಸ್ತಾನ ಮಾಡಲು ಬಿಡುವುದಿಲ್ಲ: ಸಚಿವ ಈಶ್ವರಪ್ಪ
ಕಾಂಗ್ರೆಸ್ ಸರ್ಕಾರವು ಭಾರತವನ್ನ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ಸರ್ಕಾರವು ಭಾರತವನ್ನ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದ್ದಾರೆ.
ಬೆಳಗಾವಿ ಅಧಿವೇಶನಕ್ಕೆ ಆಗಮಿಸಿದ್ದ ಈಶ್ವರಪ್ಪ ಮಾದ್ಯಮದವರೊಂದಿಗೆ ಮಾತನಾಡುತ್ತಾ ಮತಾಂತರ ನಿಷೇಧ ಕಾಯ್ದೆಯ ಬಗ್ಗೆ ಪ್ರಸ್ತಾಪಿಸಿ ಭಾರತವನ್ನು ಪಾಕಿಸ್ತಾನ ಮಾಡಲು ಹೊರಟ ಕಾಂಗ್ರೆಸ್ ಸರ್ಕಾರ, ಈ ವಿಚಾರವನ್ನು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‍ಗೆ ಸದನದಲ್ಲೆ ಪ್ರಶ್ನೆ ಮಾಡುತ್ತೇನೆ ಎಂದರು.
ಪಾಕಿಸ್ತಾನದಲ್ಲಿ 24% ಹಿಂದುಗಳನ್ನ ಕೇವಲ 3% ತಂದು ನಿಲ್ಲಿಸಿರುವ ವಿಚಾರ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿಲ್ವ? ಯಾವುದೇ ಕಾರಣಕ್ಕೂ ಆಸೆ ಆಕಾಂಕ್ಷೆಗಳನ್ನು ತೋರಿಸಿ ಬಲವಂತದ ಮತಾಂತರ ನಿಷೇಧ ಕಾಯ್ದೆಯನ್ನು ತರ್ತೇವೆ ಲವ್ ಜಿಹಾದಿ, ಮತಾಂತರ ನಿಷೇಧ ಕಾಯ್ದೆ ಭಾರತೀಯ ಜನತಾ ಪಾರ್ಟಿ ಒಪ್ಪುವುದಿಲ್ಲ ಜೊತೆಗೆ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ ಎಂದ ಹೇಳಿದರು.
ರಾಹುಲ್ ಗಾಂಧಿ ಹಿಂದು ಅಂತ ಹೇಳಿಕೆ ನೀಡಿದ್ದರೆ ಸಂತೋಷ, ಆದರೆ ಇದೆಲ್ಲ ಚುನಾವಣೆಯಲ್ಲಿ ಹಿಂದು ಮತ್ತು ಮುಸಲ್ಮಾನರ ಮತ ಪಡೆದುಕೊಳ್ಳಲು ಇವರು ಆಡ್ತಾ ಇರೋ ಪ್ರಚಾರದ ನಾಟಕ ಎಂದು ಇದೇ ಸಂದರ್ಭದಲ್ಲಿ ಹೇಳಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


