ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲು ಕ್ರಮ: ಆರ್ ಅಶೋಕ್
ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಕಂದಾಯ ಸಚಿವ ಆರ್ ಅಶೋಕ್ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.

ಬೆಳಗಾವಿ: ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಕಂದಾಯ ಸಚಿವ ಆರ್ ಅಶೋಕ್ ಅವರು ಮಂಗಳವಾರ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಇಂದು ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಕೆ.ರಾಠೋಡ್ ಅವರು ಲಂಬಾಣಿ ತಾಂಡಾಗಳಲ್ಲಿ ಸುಸಜ್ಜಿತ ಸರ್ಕಾರಿ ಶಾಲೆಗಳನ್ನು ತೆರೆಯಬೇಕು, ಮೂಲಭೂತ ಸೌಕರ್ಯ ಒದಗಿಸಬೇಕು. ಈ ಬಗ್ಗೆ ಕಂದಾಯ ಸಚಿವರು ಉತ್ತರ ನೀಡಬೇಕೆಂದು ಆಗ್ರಹಿಸಿದರು.
ಲಂಬಾಣಿ ಜನಾಂಗದವರು ಅಲೆಮಾರಿ ಜೀವನ ನಡೆಸುವವರು. ಅವರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗುತ್ತಿರುತ್ತಾರೆ. ಈಗೀಗ ಅವರು ಒಂದು ಕಡೆ ಭದ್ರವಾಗಿ ಜೀವನ ನಡೆಸಲು ಪ್ರಾರಂಭಿಸಿದ್ದಾರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿರುವ ಎಲ್ಲಾ ಲಂಬಾಣಿ ತಾಂಡಗಳನ್ನ ಕಂದಾಯ ಗ್ರಾಮಗಳಾಗಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಉತ್ತರ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


