ವಾರಣಾಸಿ ಭೇಟಿ ಫಲಪ್ರದವಾಗಿತ್ತು: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಾರಣಾಸಿಗೆ ಭೇಟಿ ನೀಡಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಜತೆ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ವಾರಣಾಸಿಗೆ ಭೇಟಿ ನೀಡಿದ್ದು, ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕ ಸೇರಿದಂತೆ ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಜತೆ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸಭೆ ಫಲಪ್ರದವಾಗಿತ್ತು ಎಂದು ಹೇಳಿದರು.
ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದರು.
ಸಭೆಯಲ್ಲಿ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಬಹುದಾದ ಕೆಲವು ಹೊಸ ಅಭಿವೃದ್ಧಿ ಯೋಜನೆಗಳ ಬಗ್ಗೆ ಬೆಳಕು ಚೆಲ್ಲಲಾಯಿತು ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಸರ್ಕಾರ ಮನಸ್ಸು ಮಾಡಿದ್ರೆ ಏನು ಬೇಕಾದ್ರು ಮಾಡಬಹುದು ಎಂಬುದಕ್ಕೆ ಕಾಶಿ ವಿಶ್ವನಾಥನ ಕಾರಿಡಾರ್ ಸಾಕ್ಷಿ: ಸಿಎಂ ಬೊಮ್ಮಾಯಿ
ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಮುಖ್ಯಮಂತ್ರಿಗಳ ಈ ಸಭೆಯು ಜನರ ಅನುಕೂಲಕ್ಕಾಗಿ ಕಲ್ಯಾಣ ಕಾರ್ಯಕ್ರಮಗಳ ವಿಚಾರ ವಿನಿಮಯದ ಮೇಲೆ ಕೇಂದ್ರೀಕರಿಸಿತ್ತು ಎಂದು ಹೇಳಿದರು.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣದ ರಾಜ್ಯಗಳ ಸಂಸತ್ತಿನ ಸದಸ್ಯರೊಂದಿಗೆ ವರ್ಚುವಲ್ ಸಭೆ ಕರೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕರ್ನಾಟಕದ ಎಲ್ಲಾ 25 ಲೋಕಸಭಾ ಸಂಸದರು ಸಭಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


