ಬೆಂಗಳೂರು: ಯಲಹಂಕ ವಾಯುನೆಲೆ ತಲುಪಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಪಾರ್ಥಿವ ಶರೀರ
ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಯಲಹಂಕ ವಾಯುನೆಲೆ ತಲುಪಿತು. ವಾಯಪಡೆಯ ಸೇನಾ ಅಧಿಕಾರಿಗಳು ಅಂತಿಮ ಗೌರವ ಸಲ್ಲಿಸಿದರು.

ಬೆಂಗಳೂರು: ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದ ವಾಯುಪಡೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರ ಇಂದು ಬೆಳಗ್ಗೆ ಯಲಹಂಕ ವಾಯುನೆಲೆ ತಲುಪಿತು. ವಾಯಪಡೆಯ ಸೇನಾ ಅಧಿಕಾರಿಗಳು ಅಂತಿಮ ಗೌರವ ಸಲ್ಲಿಸಿದರು.
ತಮಿಳುನಾಡಿನ ಕುನೂರು ಬಳಿ ಡಿಸೆಂಬರ್ 8 ರಂದು ಸಂಭವಿಸಿದ್ದ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು 8 ದಿನಗಳವರೆಗೂ ಬದುಕುಳಿದಿದ್ದ ಏಕೈಕ ಸೇನಾ ಅಧಿಕಾರಿ ವರುಣ್ ಸಿಂಗ್ ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾದರು.
ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್ ದುರಂತ: ಬದುಕುಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವಿಧಿವಶ; ಪ್ರಧಾನಿ ಸೇರಿ ಹಲವರು ಸಂತಾಪ
ಕ್ಯಾಪ್ಟನ್ ವರುಣ್ ಸಿಂಗ್ ಅವರ ಪಾರ್ಥಿವ ಶರೀರವನ್ನು ಯಲಹಂಕ ವಾಯುನೆಲೆಯಿಂದ ವಿಶೇಷ ವಿಮಾನ ಮೂಲಕ ಉತ್ತರ ಪ್ರದೇಶಕ್ಕೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


