ತುಮಕೂರು: ಪತ್ನಿ -ಪುತ್ರಿಯೊಂದಿಗೆ ಹೇಮಾವತಿ ನಾಲೆಗೆ ಹಾರಿ ಎಂಜಿನೀಯರ್ ಆತ್ಮಹತ್ಯೆ
ಹೇಮಾವತಿ ನಾಲಾ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಪತ್ನಿ, ಪುತ್ರಿಯೊಂದಿಗೆ ನಾಲೆಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.

ತುಮಕೂರು: ಹೇಮಾವತಿ ನಾಲಾ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಪತ್ನಿ, ಪುತ್ರಿಯೊಂದಿಗೆ ನಾಲೆಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.
ಎಂಜಿನಿಯರ್ ರಮೇಶ್ (55), ಪತ್ನಿ ಮಮತ (45), ಪುತ್ರಿ ಶುಭಾ (25) ಆತ್ಮಹತ್ಯೆ ಮಾಡಿಕೊಂಡವರು.
ಗುರುವಾರ ಸಂಜೆ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಮಕೂರು ಜಿಲ್ಲೆಯ ಹೇಮಾವತಿ ನಾಲಾ ವಿಭಾಗದ ಎಇಇ ರಮೇಶ್ ಹಾಗೂ ಕುಟುಂಬ ಆತ್ಮಹತ್ಯೆ ಶರಣಾಗಿದ್ದಾರೆ.
ತಡರಾತ್ರಿ ಓಮಿನಿಯಲ್ಲಿ ಆಗಮಿಸಿದ ರಮೇಶ್, ಪತ್ನಿ ಮಮತ ಹಾಗೂ ಮಗಳು ಶುಭಾ ಅವರುಗಳು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಓಮಿನಿ ಕಾರಿನಲ್ಲಿ ಬಂದಿದ್ದ ಮೂವರೂ ಕೂಡ ಹರಿಯುವ ನೀರಿಗೆ ಹಾರಿ ಆತ್ಮಹತ್ಯೆ ಗೆ ಶರಣಾಗಿದ್ದು ಹಲವು ಅನುಮಾನಗಳು ಹುಟ್ಟು ಹಾಕಿವೆ. ಮಮತ ಮತ್ತು ಶುಭಾ ಅವರ ಶವ ಸಿಕ್ಕಿದ್ದು, ರಮೇಶ್ ಅವರ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ.
ಇನ್ನು ರಮೇಶ್ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಕ್ರಾಸ್ ನಲ್ಲಿ ಹೇಮಾವತಿ ನಾಲಾ ವಿಭಾಗದ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ತುಮಕೂರು ನಗರದಲ್ಲಿ ಕುಟುಂಬ ಸಮೇತ ವಾಸವಿದ್ದರು. ಮಹಾರಾಷ್ಟ್ರದ ಸೊಲ್ಲಾಪುರ ಮೂಲದ ಹೋಟೆಲ್ ಉದ್ಯಮಿಗೆ ಮಗಳು ಶುಭಾಳನ್ನ 15 ದಿನಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


