ರಾಜ್ಯ

ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ದಾವಣಗೆರೆ ಜಿಲ್ಲೆಯ ನ್ಯಾಮತಿ ಬಳಿ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ.

ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ
ಅಪಘಾತ ದೃಶ್ಯ
Published On :

ದಾವಣಗೆರೆ: ದಾವಣಗೆರೆ ಜಿಲ್ಲೆಯ ನ್ಯಾಮತಿ ಬಳಿ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ. 

ಸವಳಂಗ ಬಳಿ ಮಧ್ಯಾಹ್ನ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ಮೃತರನ್ನು ಭದ್ರವತಿಯ ಎಡೇಹಳ್ಳಿ ಗ್ರಾಮದ ಸುನೀಲ್ ದ್ರಾಕ್ಷಾಣಿ, ಸುಮ ಮತ್ತು ಶಾರದಮ್ಮ ಎಂದು ಗುರುತಿಸಲಾಗಿದೆ. ಇನ್ನು ಗಾಯಗೊಂಡಿರುವ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಅಪಘಾತದ ಸ್ಥಳಕ್ಕೆ ಹೊನ್ನಾಳಿ ಸಿಪಿಐ ದೇವರಾಜ್ ಹಾಗೂ ನ್ಯಾಮತಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಮೃತರು ಯಡೇಹಳ್ಳಿಯಿಂದ ನ್ಯಾಮತಿ ತಾಲೂಕಿನ ಹಳೇಜೋಗ ಗ್ರಾಮಕ್ಕೆ ಕಾರ್ಯಕ್ರಮವೊಂದಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.