ಬೆಂಗಳೂರು: ಶಿವಾಜಿ ಪ್ರತಿಮೆಗೆ ಅಪರಿಚಿತರಿಂದ ಮಸಿ, ಪ್ರಕರಣ ದಾಖಲು
ಸದಾಶಿವನಗರದಲ್ಲಿರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿಸಿದಿರುವ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಸದಾಶಿವನಗರದಲ್ಲಿರುವ ಛತ್ರಪತಿ ಶಿವಾಜಿ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿಸಿದಿರುವ ಘಟನೆ ನಡೆದಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಕೆಲವೇ ನಿಮಿಷಗಳಲ್ಲಿ ಪ್ರತಿಮೆಯನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿದರು. ಅಲ್ಲದೆ, ಮುಂಜಾಗ್ರತಾ ಕ್ರಮವಾಗಿ ಶಿವಾಜಿ ಪ್ರತಿಮೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದರು.
ಈ ಸಂಬಂಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಶಾಂತಿಭಂಗ ಆರೋಪದಡಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಬೆಳಗಾವಿಯಲ್ಲಿ ಎಂಇಎಸ್ ಮುಖಂಡರ ಮುಖಕ್ಕೆ ಮಸಿ ಬಳಿದ ಘಟನೆಯಿಂದ ಕೆರಳಿದ ಮರಾಠಿಗರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡದ ಬಾವುಟಕ್ಕೆ ಬೆಂಕಿ ಹಚ್ಚಿದ್ದರು. ಈ ಘಟನೆ ಬಗ್ಗೆ ರಾಜ್ಯವ್ಯಾಪಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಕೆರಳಿದವರು ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಎರಚಿರಬಹುದು ಎಂದು ಮೂಲಗಳು ತಿಳಿಸಿವೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ತನಿಖೆ ಆರಂಭಿಸಿದ್ದು, ಘಟನಾ ಸ್ಥಳದ ಸಿಸಿಟಿವಿ ಕ್ಯಾಮೆರಾಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


