ರಾಜ್ಯ

ಕಾನೂನನ್ನು ಕೈಗೆತ್ತಿಕೊಂಡರೆ ಕಠಿಣ ಕ್ರಮ, ಹಿಂದಿನ ಸರ್ಕಾರಗಳು ಮಾಡದಿರುವ ಕೆಲಸ ನಾವು ಮಾಡಿದ್ದೇವೆ: ಸಿಎಂ ಬೊಮ್ಮಾಯಿ

ಗಡಿನಾಡು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ.

ಕಾನೂನನ್ನು ಕೈಗೆತ್ತಿಕೊಂಡರೆ ಕಠಿಣ ಕ್ರಮ, ಹಿಂದಿನ ಸರ್ಕಾರಗಳು ಮಾಡದಿರುವ ಕೆಲಸ ನಾವು ಮಾಡಿದ್ದೇವೆ: ಸಿಎಂ ಬೊಮ್ಮಾಯಿ
ಬೆಳಗಾವಿಯಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ
Published On :

ಬೆಳಗಾವಿ: ಗಡಿನಾಡು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ.ಹಿಂದಿನ ಸರ್ಕಾರಗಳು ಯಾವುದೂ ಈ ಕೆಲಸಗಳನ್ನು ಮಾಡುತ್ತಿರಲಿಲ್ಲ. ಯಾರನ್ನೋ ಬಂಧಿಸುತ್ತಿದ್ದರು. ನಮ್ಮ ಸರ್ಕಾರದ ಗೃಹ ಇಲಾಖೆ ಪ್ರಮುಖರನ್ನು ಬಂಧಿಸಿ ಗಲಭೆ ನಿಯಂತ್ರಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಇಂದು ಅಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಹಾರಾಷ್ಟ್ರ ಸರ್ಕಾರದೊಂದಿಗೆ ಅಲ್ಲಿನ ಗೃಹ ಇಲಾಖೆ ಕಾರ್ಯದರ್ಶಿಗಳ ಜೊತೆ, ಡಿಜಿಗಳ ಜೊತೆ ನಮ್ಮ ಗೃಹ ಇಲಾಖೆ ಅಧಿಕಾರಿಗಳು ಮಾತನಾಡಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ಆಸ್ತಿಪಾಸ್ತಿ, ಜನರ ರಕ್ಷಣೆ ಮಾಡಬೇಕೆಂದು, ವಿಶೇಷವಾಗಿ ಮಹಾನಗರ ರಕ್ಷಣೆ ಮಾಡಬೇಕೆಂದು ಕೂಡ ಹೇಳಿದ್ದೇವೆ, ಇವತ್ತು ಕೂಡ ಸಲಹೆ, ಸೂಚನೆ ನೀಡುತ್ತೇನೆ ಎಂದರು.

ಬೆಳಗಾವಿ ಸೇರಿದಂತೆ ಕರ್ನಾಟಕದ ಯಾವುದೇ ಭಾಗದಲ್ಲಿ ಕಾನೂನು ಕ್ರಮವನ್ನು ಕೈಗೆ ತೆಗೆದುಕೊಂಡವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಾರಿ ನಿರ್ಣಾಯಕವಾಗಿ ಕ್ರಮ ತೆಗೆದುಕೊಂಡು ಯಾರೂ ಕೂಡ ಇಂತಹ ಪುಂಡಾಟಿಕೆ ಮುಂದುವರಿಸಿಕೊಂಡು ಹೋಗದಂತೆ ಕಠಿಣ ನಿಲುವು ತೆಗೆದುಕೊಳ್ಳುತ್ತೇವೆ ಎಂದರು.

ಇಂಟಲಿಜೆನ್ಸ್ ಫೇಲ್ಯೂರ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಆರೋಪಕ್ಕೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೀರಾ ಎಂದು ಕೇಳಿದಾಗ ಪ್ರತಿಕ್ರಿಯೆ ನೀಡದೆ ಮುಖ್ಯಮಂತ್ರಿಗಳು ಸದನದ ಕಡೆಗೆ ಸಾಗಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.