ರಾಜ್ಯ

ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅತಿಥಿ ಉಪನ್ಯಾಸಕನ ಬಂಧನ

20 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕನನ್ನು ಬಂಧಿಸಲಾಗಿದೆ.

ಮಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅತಿಥಿ ಉಪನ್ಯಾಸಕನ ಬಂಧನ
ಸಾಂದರ್ಭಿಕ ಚಿತ್ರ
Published On :

ಮಂಗಳೂರು: 20 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕನನ್ನು ಬಂಧಿಸಲಾಗಿದೆ.

ಬಂಧಿತ ವ್ಯಕ್ತಿಯನ್ನು ವಿಘ್ನೇಶ್ (40) ಎಂದು ಗುರುತಿಸಲಾಗಿದ್ದು, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ವಿಘ್ನೇಶ್ ನನ್ನು ಬಂಧಿಸಲಾಗಿದೆ.

ಈ ಹಿಂದೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿರುವ ಸಂತ್ರಸ್ತೆಯನ್ನು ಆನ್‌ಲೈನ್ ತರಗತಿಗಳ ಮೂಲಕ ನೋಡಿದ್ದ ವಿಘ್ನೇಶ್, ಕಳೆದ ಒಂದು ವರ್ಷದಿಂದ ಆಕೆಗೆ ಅನಗತ್ಯ ಮೊಬೈಲ್ ಸಂದೇಶ ರವಾನಿಸುತ್ತಿದ್ದ. ಈ ವಿಚಾರವನ್ನು ಬಾಲಕಿ ಪ್ರಾಂಶುಪಾಲರಿಗೆ ತಿಳಿಸುವುದಾಗಿ ಎಚ್ಚರಿಕೆ ನೀಡಿದ ಬಳಿಕ ಸಂದೇಶ ರವಾನೆ ನಿಲ್ಲಿಸಿದ್ದ.

ಬಳಿಕ ಕಾಲೇಜು ಅವರಣದಲ್ಲಿಯೇ ಆಕೆಯನ್ನು ಮದುವೆಯಾಗುವಂತೆ ಒತ್ತಾಯಿಸಿ ಹಿಂಬಾಲಿಸುತ್ತಿದ್ದ. ಅಲ್ಲದೆ ಈ ಬಗ್ಗೆ ದೂರು ದಾಖಲಿಸದಂತೆ ಯುವತಿಗೆ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ. 

ಈ ಸಂಬಂಧ ಸಂತ್ರಸ್ಥ ವಿದ್ಯಾರ್ಥಿನಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಬಳಿಕ ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರೋಪಿಗೆ ಷರತ್ತುಬದ್ದ ಜಾಮೀನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.