ರಾಜ್ಯ

ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ 'ಉಚಿತ ಮಾಸಿಕ ಬಸ್ ಪಾಸ್' ವಿತರಣೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗಾಗಿ “ವನಿತಾ ಸಂಗಾತಿ” ಯೋಜನೆಯಡಿಯಲ್ಲಿ ಉಚಿತ ಮಾಸಿಕ ಬಸ್‌ ಪಾಸುಗಳನ್ನು ಮುಂದಿನ ತಿಂಗಳಿನಿಂದ ವಿತರಿಸಲಿದೆ.

ಗಾರ್ಮೆಂಟ್ಸ್ ಮಹಿಳಾ ಕಾರ್ಮಿಕರಿಗೆ ಗುಡ್ ನ್ಯೂಸ್: ಬಿಎಂಟಿಸಿಯಿಂದ 'ಉಚಿತ ಮಾಸಿಕ ಬಸ್ ಪಾಸ್' ವಿತರಣೆ
Published On :

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಾರ್ಮಿಕ ಇಲಾಖೆ ಸಹಭಾಗಿತ್ವದಲ್ಲಿ ಗಾರ್ಮೆಂಟ್ಸ್‌ಗಳಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಕಾರ್ಮಿಕರಿಗಾಗಿ “ವನಿತಾ ಸಂಗಾತಿ” ಯೋಜನೆಯಡಿಯಲ್ಲಿ ಉಚಿತ ಮಾಸಿಕ  ಬಸ್‌ ಪಾಸುಗಳನ್ನು ಮುಂದಿನ ತಿಂಗಳಿನಿಂದ ವಿತರಿಸಲಿದೆ.

ವನಿತಾ ಸಂಗಾತಿ ಪಾಸ್ ಪಡೆಯಲಿಚ್ಚಿಸುವ ಮಹಿಳಾ ಕಾರ್ಮಿಕರು, ಕರ್ತವ್ಯ ನಿರ್ವಹಿಸುವ ಗಾರ್ಮೆಂಟ್ಸ್ ಕಾರ್ಖಾನೆ ಮಾಲೀಕರಿಗೆ ಮನವಿ ಸಲ್ಲಿಸಬೇಕು, ಮಾಲೀಕರು ಪಾಸ್ ಪಡೆಯಲಿಚ್ಚಿಸುವ ಮಹಿಳಾ ಕಾರ್ಮಿಕರ ಪಟ್ಟಿಯನ್ನು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಇ-ಮೇಲ್ ವಿಳಾಸ Welfarecommissioner123@gmail.com ಗೆ ಸಲ್ಲಿಸಬೇಕು.

ವನಿತಾ ಸಂಗಾತಿ ಪಾಸಿಗಾಗಿ ಗಾರ್ಮೆಂಟ್ಸ್ ಮಾಲೀಕರಿಂದ ಸ್ವೀಕರಿಸುವ ಕೋರಿಕೆಗಳನ್ನು ಕರ್ನಾಟಕ ಕಾರ್ಮಿಕ ಮಂಡಳಿ ಪರಿಶೀಲಿಸಿ ಅರ್ಹ ಕಾರ್ಮಿಕರ ಪಟ್ಟಿಯನ್ನು ಬಿಎಂಟಿಸಿಗೆ ಸಲ್ಲಿಸುತ್ತದೆ. ಗಾರ್ಮೆಂಟ್ಸ್ ಮಾಲೀಕರು ಜನವರಿ 2022ರ ಮಾಹಿತಿಗೆ ಅವಶ್ಯವಿರುವ ವನಿತಾ ಸಂಗಾತಿ ಪಾಸುಗಳ ಬೇಡಿಕೆಯನ್ನು ಡಿಸೆಂಬರ್ 22 ರೊಳಗೆ ಕಾರ್ಮಿಕ ಇಲಾಖೆಗೆ (Welfarecommissioner123@gmail.com) ಸಲ್ಲಿಸಬೇಕಾಗಿದೆ. 

ವನಿತಾ ಸಂಗಾತಿ ಪಾಸು ಪಡೆದ ಮಹಿಳಾ ಕಾರ್ಮಿಕರು ಸಂಸ್ಥೆಯ ಎಲ್ಲಾ ಸಾಮಾನ್ಯ ಸೇವೆಯ ಬಸ್ ಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.