2021ರಲ್ಲಿ ಬಳ್ಳಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 180 ಮಂದಿ ಸಾವು: ಗಣಿ ಲಾರಿಗಳು, ಹದಗೆಟ್ಟ ರಸ್ತೆಗಳು ಕಾರಣ!
ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ 2021 ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಬರೋಬ್ಬರಿ 180 ಮಂದಿ ಮೃತಪಟ್ಟಿದ್ದಾರೆ ಮತ್ತು ಗಣಿಗಾರಿಕೆ ಲಾರಿಗಳಿಂದ ಹೆಚ್ಚು ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಲಾಕ್ಡೌನ್ ನಿಂದ ಗಣಿ ಉದ್ಯಮವು...

ಬಳ್ಳಾರಿ: ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ 2021 ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಬರೋಬ್ಬರಿ 180 ಮಂದಿ ಮೃತಪಟ್ಟಿದ್ದಾರೆ ಮತ್ತು ಗಣಿಗಾರಿಕೆ ಲಾರಿಗಳಿಂದ ಹೆಚ್ಚು ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಲಾಕ್ಡೌನ್ ನಿಂದ ಗಣಿ ಉದ್ಯಮವು ನಿಧಾನಗತಿಯಲ್ಲಿದ್ದಾಗಲೂ ಅಪಘಾತದಲ್ಲಿ 110 ಸಾವುಗಳು ವರದಿಯಾಗಿವೆ.
ಈ ಜಿಲ್ಲೆಗಳಲ್ಲಿ ಸುಮಾರು 5,000 ಟ್ರಕ್ಗಳು ಗಣಿಗಾರಿಕೆ ಉತ್ಪನ್ನಗಳನ್ನು ಸಾಗಿಸುತ್ತವೆ. ಭಾರೀ ವಾಹನಗಳ ಸಂಚಾರದಿಂದ ರಸ್ತೆಯ ಸ್ಥಿತಿಯೂ ಹಾಳಾಗಿದ್ದು, ಮತ್ತಷ್ಟು ಅಪಘಾತಗಳಿಗೆ ಕಾರವಾಗಿದೆ. ಅಂಕಿಅಂಶಗಳ ಪ್ರಕಾರ, ಈ ವರ್ಷ ಸಾವನ್ನಪ್ಪಿದ 180 ಜನರಲ್ಲಿ 110 ಜನರು ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳಾಗಿದ್ದಾರೆ.
ಬಳ್ಳಾರಿಯ ಸಾಮಾಜಿಕ ಕಾರ್ಯಕರ್ತ ಭರತ್ ರೆಡ್ಡಿ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 1,650 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. "ಬಳ್ಳಾರಿ ಜಿಲ್ಲೆಯಲ್ಲಿ ಪ್ರಮುಖ ಗಣಿಗಾರಿಕೆ ಘಟಕಗಳು ಇರುವುದರಿಂದ ಗಣಿಗಾರಿಕೆ ಟ್ರಕ್ಗಳ ಸಂಚಾರ ಹೆಚ್ಚಾಗಿದೆ. ಕಳೆದ ವರ್ಷ ಸಾಂಕ್ರಾಮಿಕ ಲಾಕ್ಡೌನ್ನಿಂದಾಗಿ ವಾಹನಗಳ ಸಂಖ್ಯೆ ಕಡಿಮೆಯಾಗಿತ್ತು" ಎಂದು ಅವರು ತಿಳಿಸಿದ್ದಾರೆ.
ಬಳ್ಳಾರಿ ಮತ್ತು ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ ಹಾಗೂ ಸಂಡೂರಿನಿಂದ ಬಳ್ಳಾರಿ ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. ಹೊಸಪೇಟೆ ಹಾಗೂ ಬಳ್ಳಾರಿ ಎನ್ಎಚ್ 67 ಕಾಮಗಾರಿ ಅಪೂರ್ಣವಾಗಿದ್ದು, ಇದರಿಂದ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ನಿವಾಸಿಗಳು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ಗಣಿಗಾರಿಕೆ ಟ್ರಕ್ಗಳ ದುಡುಕಿನ ಚಾಲನೆಯಿಂದಾಗಿ ಅನೇಕ ಪಾದಚಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


