ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟ: ಇಂದು ಒಂದೇ ದಿನ 12 ಮಂದಿಗೆ ಸೋಂಕು, ಬೆಂಗಳೂರಿನಲ್ಲೇ 10 ಪ್ರಕರಣ
ರಾಜ್ಯದಲ್ಲಿ ದಿನ ಕಳೆದಂತೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು ಇಂದು ಒಂದೇ ದಿನ 12 ಮಂದಿಗೆ ಓಮಿಕ್ರಾನ್ ವಕ್ಕರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ದಿನ ಕಳೆದಂತೆ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು ಇಂದು ಒಂದೇ ದಿನ 12 ಮಂದಿಗೆ ಓಮಿಕ್ರಾನ್ ವಕ್ಕರಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು ಬರೋಬ್ಬರಿ 10 ಮಂದಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ಬೆಂಗಳೂರಿನಲ್ಲಿ 20 ವರ್ಷದ ಯುವತಿ, 56 ವರ್ಷದ ವ್ಯಕ್ತಿ, 54 ವರ್ಷದ ಮಹಿಳೆಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ಇನ್ನುಳಿದಂತೆ ಬ್ರಿಟನ್ ನಿಂದ ಬೆಂಗಳೂರಿಗೆ ಆಗಮಿಸಿದ್ದ 31 ವರ್ಷದ ಪುರುಷ, 42 ವರ್ಷದ ಪುರುಷ, 21 ವರ್ಷದ ಯುವಕ, 18 ವರ್ಷದ ಯುವತಿ, 11 ವರ್ಷದ ಬಾಲಕಿ ಇನ್ನು ನೈಜಿರಿಯಾದಿಂದ ಬಂದಿದ್ದ 59 ವರ್ಷದ ಮಹಿಳೆ ಹಾಗೂ ಡೆನ್ಮಾರ್ಕ್ ನಿಂದ ಬಂದಿದ್ದ 49 ವರ್ಷದ ಮಹಿಳೆಗೆ ಓಮಿಕ್ರಾನ್ ಸೋಂಕು ತಗುಲಿದೆ.
ಗಾನಾದಿಂದ ಮಂಗಳೂರಿಗೆ ಆಗಮಿಸಿರುವ 27 ವರ್ಷ ಯುವಕ ಹಾಗೂ ಸ್ವಿಜರ್ಲ್ಯಾಂಡ್ ನಿಂದ ಮೈಸೂರಿಗೆ ಆಗಮಿಸಿದ್ದ 9 ವರ್ಷದ ಬಾಲಕಿಗೆ ಓಮಿಕ್ರಾನ್ ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಇದುವರೆಗೂ 31 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ.
ಒಟ್ಟಾರೆ ಬೆಂಗಳೂರಿನಲ್ಲಿ 18, ದಕ್ಷಿಣ ಕನ್ನಡದಲ್ಲಿ 7, ಉಡುಪಿ 2, ಧಾರವಾಡ, ಬೆಳಗಾವಿ, ಶಿವಮೊಗ್ಗ, ಮೈಸೂರಿನಲ್ಲಿ ತಲಾ 1 ಪ್ರಕರಣ ಪತ್ತೆಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


